ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ಸಿದ್ದರಾಮಯ್ಯ ಬೆಂಗವಾಲು ವಾಹನ ಅಪಘಾತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 03; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದೊಳಗೆ ನುಗ್ಗಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿ ಸಮೀಪ ಈ ಅಪಘಾತ ನಡೆದಿದೆ. ಚಿಕ್ಕಮಗಳೂರಿನಲ್ಲಿ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ಶಾಂತವೇರಿ ಮೂಲಕ ಶಿವಮೊಗ್ಗಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತೆರಳುತ್ತಿದ್ದರು.

ಬಿಜೆಪಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ; ಧ್ರುವನಾರಾಯಣಬಿಜೆಪಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ; ಧ್ರುವನಾರಾಯಣ

ಮಧ್ಯಾಹ್ನದ ನಂತರ ಮಳೆ ಸುರಿಯಿತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ಅಪಘಾತಕ್ಕೀಡಾಗಿದೆ. ಬೆಂಗಾವಲು ವಾಹನದ ಸಿಬ್ಬಂದಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ವಾಹನ ಅಪಘಾತ ಸಂಭವಿಸುತ್ತಿದ್ದಂತೆ ಮಳೆಯ ನಡುವೆಯೂ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಿನಿಂದ ಇಳಿದು ಬಂದು ವಾಹನದಲ್ಲಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು.

ಪರಿಷತ್ ಫೈಟ್; ಸರ್ಕಾರಿ ಅಧಿಕಾರಿ ಕೈಯಲ್ಲಿ ಕಾಂಗ್ರೆಸ್ ಬಿ-ಫಾರಂ! ಪರಿಷತ್ ಫೈಟ್; ಸರ್ಕಾರಿ ಅಧಿಕಾರಿ ಕೈಯಲ್ಲಿ ಕಾಂಗ್ರೆಸ್ ಬಿ-ಫಾರಂ!

Siddaramaiah Convoy Vehicle Involved In Road Accident

ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ; ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ. "ಬಿಜೆಪಿಗೆ ಸಮಾಜಿಕ ನ್ಯಾಯ, ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ" ಎಂದು ಟೀಕಿಸಿದರು.

ಚಿಕ್ಕಮಗಳೂರು; ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಚಿಕ್ಕಮಗಳೂರು; ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ

"ಬಿಜೆಪಿಯವರು ಜನ ಸ್ವರಾಜ್ಯ ಯಾತ್ರೆ ಆರಂಭಿಸಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿ ಅವರೇ ಅಧಿಕಾರದಲ್ಲಿದ್ದರೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡಲಿಲ್ಲ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇದ್ದಿದ್ದರೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಮುಂದೂಡುತ್ತಿರಲಿಲ್ಲ. ಚುನಾವಣೆ ಮು೦ದೂಡಲು ಒಂದು ಕಾನೂನು ಬೇರೆ ತಂದಿದ್ದಾರೆ" ಎಂದರು.

"ಚುನಾವಣೆ ನಡೆಸುವ ವಿಚಾರದಲ್ಲಿ ಬಿಜೆಪಿಯವರಿಗೆ ಬದ್ಧತೆ ಇಲ್ಲ. ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳಾದರೂ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಶಕ್ತಿ ತುಂಬಲಿಲ್ಲ. ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ. ಸಾಮಾಜಿಕ ನ್ಯಾಯ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿರುವ ಬಿಜೆಪಿಯವರಿಗೆ ಜನ ಸ್ವರಾಜ್ಯ ಯಾತ್ರೆ ನಡೆಸಲು ನೈತಿಕ ಹಕ್ಕಿಲ್ಲ" ಎಂದು ದೂರಿದರು.

"ಪಂಚಾಯತ್ ರಾಜ್ ವ್ಯವಸ್ಥೆ, ಸಾಮಾಜಿಕ ನ್ಯಾಯದ ಬಗ್ಗೆ ಒಂದು ದಿನವೂ ಬಿಜೆಪಿ ನಾಯಕರು ಮಾತಾಡಿಲ್ಲ. ಅವರಿಗೆ ಆ ಕುರಿತು ಬದ್ಧತೆಯೇ ಇಲ್ಲ. ಇಂಥವರು ಗೆದ್ದು ಬ೦ದರೆ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಾಧ್ಯವಿಲ್ಲ" ಎಂದರು.

"ಕ್ಷೇತ್ರದಿಂದ ಕಳೆದ ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹೋದ ಪ್ರಾಣೇಶ್ ಒಂದು ದಿನವೂ ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಮಾತಾಡಿಲ್ಲ. ಯಾವುದೇ ಪಂಚಾಯತಿಗೆ ಹೋಗಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ಕೊಟ್ಟಿದ್ದರೆ ಅದು ಕಾಂಗ್ರೆಸ್. ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದರು. ನರಸಿಂಹರಾವ್ ಅವರು ಅದನ್ನು ಜಾರಿಗೊಳಿಸಿದರು" ಎಂದು ತಿಳಿಸಿದರು.

"ರಾಜ್ಯ ಬಿಜೆಪಿ ಸರ್ಕಾರ ಮೂರೂವರೆ ವರ್ಷದಲ್ಲಿ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಕೊಟ್ಟಿದ್ದರೆ ಸಿ. ಟಿ. ರವಿ ಹೇಳಲಿ. ನಮ್ಮ ಅವಧಿಯಲ್ಲಿ ಮಂಜೂರಾದ ಮನೆಗಳಿಗೆ ಎರಡನೇ ಕಂತಿನ ಅನುದಾನ ಕೊಡದೇ ಲಾಕ್ ಮಾಡಿದರು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ವಿಚಾರದಲ್ಲಿ ಮೋದಿಯವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಸತ್ಯ ಹೇಳಬೇಕು" ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

Recommended Video

ಕಾರು,ಬಸ್ ಕೆಟ್ಟೋದ್ರೆ ತಳ್ತೀವಿ ಹಾಗೇ ವಿಮಾನ ಕೆಟ್ಟಾಗ ತಳ್ಳೋದನ್ನ ನೋಡಿದ್ದೀರಾ | Oneindia Kannada

"ಗುಂಡಾಗಳನ್ನು ಕರೆಸಿಕೊಂಡು ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ" ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ಬಿಜೆಪಿ ಅಧಿಕೃತ ಅಭ್ಯರ್ಥಿ ಇದ್ದರು ಸಹ ರಮೇಶ್ ಜಾರಕಿಹೊಳಿ ಪಕ್ಷದ ವಿರುದ್ಧವೇ ಅವರ ತಮ್ಮ ಲಖನ್ ಜಾರಕಿಹೊಳಿಯನ್ನು ಚುನಾವಣೆಗೆ ನಿಲ್ಲಿಸಿದ್ದಾರೆ ಅವರಿಗೆ ಈ ಹೇಳಿಕೆ ನೀಡಲು ನೈತಿಕತೆ ಇಲ್ಲ" ಎಂದರು.

English summary
Leader of opposition Siddaramaiah convoy vehicle involved in road accident at Chikkamagaluru. Siddaraiah and D. K. Shivakumar on their way to Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X