ಶೃಂಗೇರಿ ಅತ್ಯಾಚಾರ ಪ್ರಕರಣ; ಪಿಎಸ್‌ಐ ಕೀರ್ತಿ ಕುಮಾರ್ ಎತ್ತಂಗಡಿ

ಚಿಕ್ಕಮಗಳೂರು, ಫೆಬ್ರವರಿ 7: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಶೃಂಗೇರಿಯಿಂದ ಉತ್ತರ ಕನ್ನಡದ ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಸದ್ಯ ಪ್ರಕರಣದ ತನಿಖೆಯನ್ನು ಎಎಸ್ಪಿ ಶೃತಿ ವಹಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ, 8 ಆರೋಪಿಗಳ ಬಂಧನವಾಗಿದೆ.

Chikkamagaluru

ಉಳಿದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಿಎಸ್‌ಐ ವರ್ಗಾವಣೆ ಮಾಡಲಾಗಿದೆ. ಹೊಸ ತಂಡದ ಜೊತೆ ಎಎಸ್ಪಿ ಶೃತಿ ತನಿಖೆಯನ್ನು ಮುಂದುವರೆಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಈ ಕುರಿತು ವಿಷಯ ಪ್ರಸ್ತಾಪಿಸಿದ್ದರು. "ಆರೋಪಿಗಳಲ್ಲಿ ಬಹುತೇಕರು ರಾಜಕೀಯ ಪಕ್ಷದಲ್ಲಿ, ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ, ನಿಷ್ಪಕ್ಷಪಾತ ತನಿಖೆಯಾಗಬೇಕು" ಎಂದು ಒತ್ತಾಯಿಸಿದ್ದರು.

ಈ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, "ಪ್ರಕರಣದ ತನಿಖೆ ಸಂಬಂಧ ಯಾವುದೇ ಒತ್ತಡವಿಲ್ಲ. ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಯಾಗಲಿದೆ. ಅಮಾಯಕರು ಯಾರು? ಎಂಬುದು ತನಿಖೆ ಬಳಿಕ ತಿಳಿಯಲಿದೆ" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+