ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೃಂಗೇರಿ ಅತ್ಯಾಚಾರ ಪ್ರಕರಣ; ಪಿಎಸ್‌ಐ ಕೀರ್ತಿ ಕುಮಾರ್ ಎತ್ತಂಗಡಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 7: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಶೃಂಗೇರಿಯಿಂದ ಉತ್ತರ ಕನ್ನಡದ ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಶೃಂಗೇರಿ ಅತ್ಯಾಚಾರ ಪ್ರಕರಣ; ಮೌನ ಮುರಿದ ಶೋಭಾ ಕರಂದ್ಲಾಜೆ ಶೃಂಗೇರಿ ಅತ್ಯಾಚಾರ ಪ್ರಕರಣ; ಮೌನ ಮುರಿದ ಶೋಭಾ ಕರಂದ್ಲಾಜೆ

ಸದ್ಯ ಪ್ರಕರಣದ ತನಿಖೆಯನ್ನು ಎಎಸ್ಪಿ ಶೃತಿ ವಹಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ, 8 ಆರೋಪಿಗಳ ಬಂಧನವಾಗಿದೆ.

ಶೃಂಗೇರಿ ಅತ್ಯಾಚಾರ ಪ್ರಕರಣ: ತನಿಖಾಧಿಕಾರಿ ಸಿದ್ದರಾಮಯ್ಯ ಅಮಾನತುಶೃಂಗೇರಿ ಅತ್ಯಾಚಾರ ಪ್ರಕರಣ: ತನಿಖಾಧಿಕಾರಿ ಸಿದ್ದರಾಮಯ್ಯ ಅಮಾನತು

Chikkamagaluru

ಉಳಿದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಿಎಸ್‌ಐ ವರ್ಗಾವಣೆ ಮಾಡಲಾಗಿದೆ. ಹೊಸ ತಂಡದ ಜೊತೆ ಎಎಸ್ಪಿ ಶೃತಿ ತನಿಖೆಯನ್ನು ಮುಂದುವರೆಸಿದ್ದಾರೆ.

ಶೃಂಗೇರಿ; ಸಾಮೂಹಿಕ ಅತ್ಯಾಚಾರ, 17 ಜನರ ವಿರುದ್ಧ ಎಫ್‌ಐಆರ್ ಶೃಂಗೇರಿ; ಸಾಮೂಹಿಕ ಅತ್ಯಾಚಾರ, 17 ಜನರ ವಿರುದ್ಧ ಎಫ್‌ಐಆರ್

ವಿಧಾನಸಭೆ ಕಲಾಪದಲ್ಲಿ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಈ ಕುರಿತು ವಿಷಯ ಪ್ರಸ್ತಾಪಿಸಿದ್ದರು. "ಆರೋಪಿಗಳಲ್ಲಿ ಬಹುತೇಕರು ರಾಜಕೀಯ ಪಕ್ಷದಲ್ಲಿ, ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ, ನಿಷ್ಪಕ್ಷಪಾತ ತನಿಖೆಯಾಗಬೇಕು" ಎಂದು ಒತ್ತಾಯಿಸಿದ್ದರು.

ಈ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, "ಪ್ರಕರಣದ ತನಿಖೆ ಸಂಬಂಧ ಯಾವುದೇ ಒತ್ತಡವಿಲ್ಲ. ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಯಾಗಲಿದೆ. ಅಮಾಯಕರು ಯಾರು? ಎಂಬುದು ತನಿಖೆ ಬಳಿಕ ತಿಳಿಯಲಿದೆ" ಎಂದು ಹೇಳಿದ್ದರು.

English summary
Sringeri police station PSI Keerthi Kumar transferred. 15 year old girl gang raped in Sringeri, Chikkamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X