ಆಪರೇಷನ್ ಕಮಲಕ್ಕೆ ಒಳಗಾಗಲ್ಲ, ಬಿಜೆಪಿ ಸೇರಲ್ಲ : ಶೃಂಗೇರಿ ಶಾಸಕ

ಶೃಂಗೇರಿ, ಫೆಬ್ರವರಿ 08: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕರು, ಕಾಂಗ್ರೆಸ್ ತೊರೆಯುತ್ತಿಲ್ಲ, ಆಪರೇಷನ್ ಕಮಲಕ್ಕೆ ಒಳಗಾಗಲ್ಲ ಎಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿರುವ ಟಿಡಿ ರಾಜೇಗೌಡ ಅವರು ತಮ್ಮ ನಿಲುವನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ತಿಳಿಸಿದ್ದು, ಈ ಬಗ್ಗೆ ಬೆಂಬಲಿಗರು ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಕೋರಿದ್ದಾರೆ.

ಶೃಂಗೇರಿಯನ್ನು ಮಾದರಿ ಕ್ಷೇತ್ರವನ್ನಾಗಿಸುವುದು ನನ್ನ ಉದ್ದೇಶ. ಇದಕ್ಕಾಗಿ ಕ್ಷೇತ್ರದ ಜನತೆಯ ಸಹಕಾರವನ್ನು ಕೋರುತ್ತೇನೆ. ಪಕ್ಷಾತೀತವಾಗಿ ಇದಕ್ಕೆ ಎಲ್ಲಾ ಜನ ಪ್ರತಿನಿಧಿಗಳು ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Sringeri : Not quitting Congress, says MLA Raje Gowda

ಸುಮಾರು 12ಕ್ಕೂ ಅಧಿಕ ಶಾಸಕರು ಗೈರಾಗುವ ನಿರೀಕ್ಷೆಯಲ್ಲಿ ಬಿಜೆಪಿಗೆ ಸರಿಯಾದ ಸಂಖ್ಯಾಬಲ ಸಿಕ್ಕಿಲ್ಲ. ಹೆಚ್ಚಿನ ಶಾಸಕರ ಬಲ ಸಿಕ್ಕರೆ, ಜೆಡಿಎಸ್ -ಕಾಂಗ್ರೆಸ್ ಪಕ್ಷದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾದಿದ್ದಾರೆ. ಒಟ್ಟಾರೆಯಾಗಿ 12 ಮಂದಿ ಕಾಂಗ್ರೆಸ್ ಶಾಸಕರು, 1 ಜೆಡಿಎಸ್, 3 ಬಿಜೆಪಿ ಶಾಸಕರು ಹಾಗೂ ಇಬ್ಬರು ಪಕ್ಷೇತರರು ಅಧಿವೇಶನಕ್ಕೆ ಗೈರು ಹಾಜರಾಗುತ್ತಿದ್ದಂತೆ ಈ ಪಟ್ಟಿಗೆ ಇನ್ನಷ್ಟು ಮಂದಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+