ಶೃಂಗೇರಿ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧಿಸುವಂತೆ ಕಾಂಗ್ರೆಸ್ ಧರಣಿ
ಚಿಕ್ಕಮಗಳೂರು, ಫೆಬ್ರವರಿ 5: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಶೃಂಗೇರಿ ಪೊಲೀಸ್ ಠಾಣೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಶೃಂಗೇರಿ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರ ಧರಣಿ ನಡೆಸಿದರು.
ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಶೃಂಗೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು. ಬಾಲಕಿ ಮೇಲಿ ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಸಹಕರಿಸಿದ್ದು, ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೋಲಿಸ್ ಆಧಿಕಾರಿಗಳು ತಿಳಿಸಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದರಲ್ಲದೆ, ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications