ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೃಂಗೇರಿ ಅತ್ಯಾಚಾರ, ಕೊಲೆ ಪ್ರಕರಣ: ತೀರ್ಪು ಮುಂದೂಡಿಕೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜನವರಿ 09: ಶೃಂಗೇರಿಯ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪುನ್ನು ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಶೋಭಾ ಕರಂದ್ಲಾಜೆ ಮೇಲೆ ಹಲ್ಲೆ ಆರೋಪ; 30 ಮಂದಿ ಮೇಲೆ ಎಫ್ ಐಆರ್ ದಾಖಲುಶೋಭಾ ಕರಂದ್ಲಾಜೆ ಮೇಲೆ ಹಲ್ಲೆ ಆರೋಪ; 30 ಮಂದಿ ಮೇಲೆ ಎಫ್ ಐಆರ್ ದಾಖಲು

ಶೃಂಗೇರಿ ತಾಲ್ಲೂಕಿನ ಮೆಣಸೆ ಗ್ರಾಮದಲ್ಲಿ 2016 ರಲ್ಲಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಬಿ.ಕಾಂ ವಿದ್ಯಾರ್ಥಿನಿಯನ್ನು ಎಳೆದಯ್ದು ಅದೇ ಊರಿನ ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದರು. ಜೊತೆಗೆ 50 ಅಡಿಯ ಬಾವಿಯಲ್ಲಿ ಎಸೆದು ಹೋಗಿದ್ದರು.

Sringeri Rape Case, Verdict Postpone

ಅಂದು ನಡೆದಿದ್ದ ಪ್ರಕರಣದಲ್ಲಿ ಪ್ರದೀಪ್ ಮತ್ತು ಸಂತೋಷ್ ವಿರುದ್ಧ ಶೃಂಗೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ‌ ತಾಲೂಕು ಮೆಣಸೆ ಗ್ರಾಮದಲ್ಲಿ ಘಟನೆ ನಡೆದಿತ್ತು.

ಮೂರೂವರೆ ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಕೊನೆಗೂ ಆ ಯುವತಿಯನ್ನು ದಾರುಣವಾಗಿ ಹತ್ಯೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆ ಪ್ರಕಟವಾಗುವ ದಿನ ನಾಳೆ ಬಂದಿದೆ.

ಇಬ್ಬರು ಆರೋಪಿಗಳನ್ನು ನೇಣಿಗೆ ಹಾಕಬೇಕು ಎಂದು ಊರಿನ ಗ್ರಾಮಸ್ಥರು ಹಾಗೂ ಯುವತಿಯ ಕುಟುಂಬಸ್ಥರು ಆಗ್ರಹಿಸಿದ್ದರು. ಆರೋಪಿಗಳ ಅಪರಾಧ ಸಾಬೀತಾಗಿರುವುದರಿಂದ ಮೃತ ಯುವತಿಯ ಕುಟುಂಬಸ್ಥರು ನೆಮ್ಮದಿಯ ಉಸಿರು ಬಿಡುತ್ತಿದ್ದು, ನಾಳೆ ಪ್ರಕಟವಾಗುವ ಶಿಕ್ಷೆಯ ಪ್ರಮಾಣದ ಬಗ್ಗೆ ಕುತೂಹಲ ಮನೆಮಾಡಿದೆ.

English summary
The Chikkamagaluru District court adjourned the verdict of the Sringeri rape and murder case to tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X