ತಮ್ಮಟದಹಳ್ಳಿ: ಕಾರು- ಕ್ರೋಸರ್‌ ನಡುವೆ ಭೀಕರ ಅಪಘಾತ: 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಹತ್ತು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು, ಮಾರ್ಚ್‌, 06: ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಪರಿಣಾಮ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿದ್ದು, ಕ್ರೂಸರ್‌ನಲ್ಲಿದ್ದ ಹತ್ತು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು-ಕ್ರೂಸರ್‌ ನಡುವೆ ಭೀಕರ ಅಪಘಾತ

ಆಗ ತಕ್ಷಣ ಅಲ್ಲಿದ್ದ ಸ್ಥಳೀಯರೆಲ್ಲ ಸೇರಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಅಜ್ಜಂಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಲಬುರುಗಿ ಜಿಲ್ಲೆಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಪ್ರವಾಸ ಮುಗಿಸಿ ಜಿಲ್ಲೆಯತ್ತ ತೆರಳುವಾಗ ಈ ಭೀಕರ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Tammatadahalli: Accident between car and cruiser: 10 students injured

ಪ್ರವಾಸ ಮುಗಿಸಿ ತಡ ರಾತ್ರಿ ಕಲಬುರಗಿಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಶಿಕ್ಷಕರು ಕ್ರೂಸರ್ ವಾಹನದಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದರು. ಸದ್ಯ ಈ ಘಟನೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಧಗಧಗಿಸಿದ ಖಾಸಗಿ ಬಸ್‌

ಇನ್ನು ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿನ ಪೂನಾ -ಬೆಂಗಳೂರು ಹೆದ್ದಾರಿಯಲ್ಲಿ ಹೊರಟಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಉರಿದಿತ್ತು. ಇದರ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

Tammatadahalli: Accident between car and cruiser: 10 students injured

ಏಕಾಏಕಿ ಹೊತ್ತಿ ಉರಿದ ಬಸ್‌

ಬೆಂಗಳೂರಿನಿಂದ ಅಥಣಿಗೆ ಹೊರಟಿದ್ದ ವಿಆರ್‌ಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್‌ನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನ ಹಿಂಬದಿಯ ಚಕ್ರಕ್ಕೆ ಏಕಾಏಕಿ ಹೊತ್ತಿಕೊಂಡಿದ್ದು, ಈ ಬೆಂಕಿ ಇಡೀ ಬಸ್ಸನ್ನೇ ಆವರಿಸಿಕೊಂಡಿದೆ. ತಕ್ಷಣವೇ ಚಾಲಕ ಬೆಂಕಿ ಹೊತ್ತಿರುವುದನ್ನು ಗಮನಿಸಿ ಬಸ್ ನಿಲ್ಲಿಸಿದ್ದು, ಪ್ರಯಾಣಿಕರೆಲ್ಲರನ್ನು ಕೆಳಗಡೆ ಇಳಿಸಿದ್ದಾನೆ.

ಅಷ್ಟೇ ಅಲ್ಲದೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆಗಲೇ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+