ತರೀಕೆರೆ: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ವ್ಯಕ್ತಿಯೋರ್ವನ ಕೊಲೆ
ಚಿಕ್ಕಮಗಳೂರು, ಜೂನ್, 04: ತರೀಕೆರೆ ಪಟ್ಟಣದಲ್ಲಿ ನೂತನ ಶಾಸಕ ಜಿ.ಹೆಚ್.ಶ್ರೀನಿವಾಸ್‌ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದರು. ಈ ವೇಳೆ ಎರಡು ಗುಂಪುಗಳ ಮಧ್ಯೆ ಕಿರಿಕ್ ಉಂಟಾಗಿದ್ದು, ಘಟನೆಯಲ್ಲಿ ಚಾಕು ಇರಿತದಿಂದ ವ್ಯಕ್ತಿಯೊಬ್ಬ ಕೊಲೆ ಆಗಿದ್ದಾನೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಚಾಕು ಇರಿದು ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವರುಣ್ (28) ಚಾಕು ಇರಿತಕ್ಕೆ ಒಳಗಾಗಿ ಮೃತಪಟ್ಟ ಯುವಕನಾಗಿದ್ದಾನೆ.

ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್‌ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದರು. ಈ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್‌ಗೆ ಡ್ರ್ಯಾಗರ್ನಿಂದ ಇರಿದಿದ್ದಾನೆ.
ಈ ವೇಳೆ ಮಂಜು ಹಾಗೂ ಸಂಜು ಎಂಬುವರ ಕೈ ಹಾಗೂ ಕಾಲಿಗೆ ಚಾಕು ಇರಿತದಿಂದ ಗಾಯಗಳಾಗಿದ್ದರೆ, ಇನ್ನು ಹೊಟ್ಟೆಗೆ ಚಾಕು ಇರಿದಿದ್ದರಿಂದ ವರುಣ್‌ಗೆ ಗಂಭೀರವಾಗಿ ಗಾಯವಾಗಿತ್ತು. ಆಗ ವರುಣ್‌ನನ್ನ ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರುಣ್ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಳಿಕ ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗಿದೆ.
ಮಕ್ಕಳನ್ನು ಕೊಂದು ಹಾಕಿದ ಪಾಪಿ ತಂದೆ
ಮತ್ತೊಂದೆಡೆ ಮಕ್ಕಳು ಅಂದರೆ ತಂದೆ, ತಾಯಿಗಳಿಗೆ ಪಂಚಪ್ರಾಣ. ಮತ್ತೊಂದೆಡೆ ಮಕ್ಕಳಾಗಿಲ್ಲ ಎಂಬ ಕೊರಗು ಎಷ್ಟೋ ದಂಪತಿಗೆ ಈಗಲೂ ಕಾಡುತ್ತಿದೆ. ಆದರೆ, ಇಲ್ಲೊಬ್ಬ ಪಾಪಿ ತಂದೆ ಮುದ್ದಾದ ಎರಡು ಮಕ್ಕಳನ್ನು ಕೊಂದು ಹಾಕಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಚಳಗೇರಿ ಟೋಲ್ ಹತ್ತಿರ ಇತ್ತೀಚೆಗಷ್ಟೇ ನಡೆದಿತ್ತು.
ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ ಅವಳಿ ಮಕ್ಕಳೇ ತಂದೆಯಿಂದಲೇ ಹತ್ಯೆಗೀಡಾದ ಪುಟಾಣಿಗಳು. ದಾವಣಗೆರೆ ನಗರದ ಆಂಜನೇಯ ಬಡಾವಣೆ ವಾಸಿ ಅಮರ್ (36) ಮಕ್ಕಳನ್ನು ಕೊಂದು ಹಾಕಿದ ನಿಷ್ಕರುಣಿ ತಂದೆ ಎಂದು ಗುರುತಿಸಲಾಗಿದೆ.
ಈತ ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದವನು. ಹರಿಹರದ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಕೆಲಸ ಮಾಡುತ್ತಿದ್ದ. ಈತ ವಿಜಯಪುರದ ಜಯಲಕ್ಷ್ಮಿ ಎಂಬಾಕೆಯನ್ನು ಕಳೆದ ಕೆಲ ವರ್ಷಗಳ ಹಿಂದೆ ವಿವಾಹವಾಗಿದ್ದ. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ವಿಜಯಲಕ್ಷ್ಮಿ ಮತ್ತು ಅಮರ್ ದಂಪತಿಗೆ ಕಳೆದ ನಾಲ್ಕು ವರ್ಷ ನಾಲ್ಕು ತಿಂಗಳ ಹಿಂದೆ ಅವಳಿ ಗಂಡು ಮಕ್ಕಳ ಜನನವಾಗಿತ್ತು. ಅದ್ವೈತ್ ಮತ್ತು ಅನ್ವಿತ್ ಎಂಬ ಹೆಸರಿಟ್ಟಿದ್ದರು. ಕುಟುಂಬದಲ್ಲಿ ಅಂಥಹ ಬಿರುಕು ಏನು ಇರಲಿಲ್ಲ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ವಿಜಯಲಕ್ಷ್ಮಿ ವಿಜಯಪುರಕ್ಕೆ ಮಕ್ಕಳು ಹಾಗೂ ಪತಿ ಬಿಟ್ಟು ಯಾವುದೋ ಕಾರಣಕ್ಕೆ ಹೋಗಿದ್ದರು. ಆಗಿನಿಂದ ಸ್ವಲ್ಪ ವಿರಸ ಉಂಟಾಗಿತ್ತು. ಮಕ್ಕಳು ಅಮರ್ ತಾಯಿ ಸಾವಿತ್ರಮ್ಮರ ಜೊತೆ ಇದ್ದರು. ಆದರೆ ಮೊನ್ನೆ ರಾತ್ರಿ 10.30ರ ಸುಮಾರಿಗೆ ತನ್ನ ಕಾರಿನಲ್ಲಿ ಅದ್ವೈತ್ ಮತ್ತು ಅನ್ವಿತ್‌ನನ್ನು ಕರೆದುಕೊಂಡು ಹೋಗಿದ್ದಾನೆ. ಮಕ್ಕಳನ್ನು ಕೊಲೆ ಮಾಡುವುದಾಗಿ ಪತ್ನಿಗೆ ಕರೆ ಮಾಡಿ ಬೆದರಿಸಿದ್ದಾನೆ.
ಆದರೆ ಬೆಳಗಿನ ಜಾವ ಚಳಗೇರಿ ಟೋಲ್ ಸಮೀಪ ಕರೆದುಕೊಂಡು ಹೋಗಿ ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಮಕ್ಕಳಿಬ್ಬರಿಗೂ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಆ ನಂತರ ಪತ್ನಿಗೆ ಫೋನ್ ಮಾಡಿ ಮಕ್ಕಳನ್ನು ಕೊಂದು ಹಾಕಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆ ಅಮರ್ ಬಂಧನಕ್ಕೆ ಬಲೆ ಬೀಸಿದ್ದಾರೆ. ಆತನ ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಹಚ್ಚಿದ್ದಾರೆ. ಬಳಿಕ ವಿಚಾರಣೆ ವೇಳೆ ಮಕ್ಕಳು ಸ್ವಲ್ಪ ಬುದ್ದಿಮಾಂದ್ಯರಾಗಿದ್ದು, ಹಠ ಮಾಡುತ್ತಿದ್ದರು. ಇದನ್ನು ಸಹಿಸಿಕೊಳ್ಳಲಾಗದೇ ಉಸಿರುಗಟ್ಟಿಸಿ ಕೊಂದು ಹಾಕಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications