ಕೊಟ್ಟಿಗೆಹಾರದಿಂದ ತೇಜಸ್ವಿ ಸಾಹಿತ್ಯ ವಿಚಾರಧಾರೆ ಕಾರ್ಯಕ್ರಮ ವರದಿ
ಕೊಟ್ಟಿಗೆಹಾರ, ಸೆಪ್ಟೆಂಬರ್ 08: ಬಹುಮುಖ ಪ್ರತಿಭೆಯ ದೈತ್ಯಪ್ರತಿಭೆ ಪೂರ್ಣಚಂದ್ರ ತೇಜಸ್ವಿ ಎಂದು ನಿವೃತ್ತ ಉಪನ್ಯಾಸಕ ಬಿ ತಿಪ್ಪೆರುದ್ರಪ್ಪ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ವತಿಯಿಂದ ನಡೆದ ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
''ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ'' ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಿದರು. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ 2021ರ ''ತೆರೆದ ಅಂಚೆ'' ಎಂಬ ಕಥಾ ಸಂಕಲನ ಲೋಕಾರ್ಪಣೆ ಮಾಡಿದರು.

ಸಾಹಿತ್ಯ, ಕೃಷಿ, ಪೋಟೋಗ್ರಫಿ, ಫಿಶಿಂಗ್, ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ ತೇಜಸ್ವಿಯವರದ್ದು ವಿಜ್ಞಾನಿಯ ಬುದ್ದಿ, ಕವಿಯ ಹೃದಯ, ತತ್ವಜ್ಞಾನಿಯ ಮನಸ್ಸು. ಕವಿ, ನಾಟಕಕಾರ,ಕಾದಂಬರಿಕಾರ ಹೀಗೆ ಅನೇಕ ಪ್ರಕಾರಗಳಲ್ಲಿ ಕೈಯಾಡಿಸಿದಂತವರು ತೇಜಸ್ವಿ. ಅವರ ಎಲ್ಲಾ ಕಥಾವಸ್ತುವಿಗೆ ಒಂದು ಹಂದರವನ್ನು ಕ್ಯಾನ್‍ವಾಸನ್ನು ಸೃಷ್ಟಿಮಾಡಿಕೊಟ್ಟಿರುವುದು ಮೂಡಿಗೆರೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್ ಮಾತನಾಡಿ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವು ತೇಜಸ್ವಿ ಅವರ ಬದುಕು ಬರಹ ಚಿಂತನೆಗಳನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಸಭಾಂಗಣ ಹಾಗೂ ತೇಜಸ್ವಿ ಬಳಸುತ್ತಿದ್ದ ವಸ್ತುಗಳ ಮ್ಯೂಸಿಯಂ ನಿರ್ಮಾರ್ಣಗೊಳ್ಳಲಿದೆ ಎಂದರು.
ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿ ನೆನಪಿನ ಕಥಾಸ್ಪರ್ಧೆಯ ತೆರೆದ ಅಂಚೆ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಬಚೂರಿನ ಮಿತ್ರವೃಂದ ತಂಡದ ಡಾ ಜಗದೀಶ್ ಡಿ.ಎಸ್, ಡಾ.ದೊರೆ ಚಿಕ್ಕಹನಸೋಗೆ, ತೇಜಸ್ವಿ ಒಡನಾಡಿ ಬಾಪು ದಿನೇಶ್, ಕನ್ನಡ ಸಂಸ್ಕೃತಿ ಇಲಾಖೆಯ ಹಿರಿಯ ಇಲೆಕ್ಟ್ರಿಷಿಯನ್ ಹಾಗೂ ಸೌಂಡ್ ಸೂಪರ್ ವೈಸರ್ ಶ್ರೀನಿವಾಸ್, ಸಾಹಿತ್ಯಾಸಕ್ತರಾದ ಡಾ.ಮಿರ್ಜಾ ಬಷೀರ್, ಸುಧಾ ಆಡುಕಳ, ಹರೀಶ್ ಟಿ.ಜಿ, ಪೂರ್ಣೇಶ್ ಮತ್ತಾವರ, ನಿಶಾಂತ್, ಸಂಜಯಗೌಡ ಕೊಟ್ಟಿಗೆಹಾರ, ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್, ಸಂಗೀತ ಇದ್ದರು.
ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಪಾಕಕ್ರಾಂತಿ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಸಾಹಿತಿಗಳಾದ ರೇಖಾ ನಾಗರಾಜರಾವ್ ಅವರು ಮಾತನಾಡಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರವಾಗಲಿದ್ದು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಫೇಸ್‌ಬುಕ್‌ನ ಕೆಪಿಪಿಟ್ರಸ್ಟ್ ಅಧಿಕೃತ ಪೇಜ್‌ನಲ್ಲಿ ವೀಕ್ಷಿಸಬಹುದಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬಗ್ಗೆ:
ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರು ಈ ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದು, ಸರ್ಕಾರವು ಇವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಸ್ಥಾಪಿಸಲಾಗಿದೆ. ಈ ಮುಖಾಂತರ ತೇಜಸ್ವಿಯವರ ಸಾಹಿತ್ಯ, ಪರಿಸರ, ಫೋಟೋಗ್ರಫಿ, ಚಿತ್ರಕಲೆ, ಕೃಷಿ ಮುಂತಾದ ಹಲವಾರು ವಿಚಾರಧಾರೆಗಳನ್ನು ಯುವಜನಾಂಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಷ್ಠಾನವು ಕಾರ್ಯೋನ್ಮುಖವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಕನ್ನಡ ಸಾಹಿತ್ಯ-ಸಂಸ್ಕೃತಿ ಚಿಂತನೆಯ ಹೊಸ ದಿಗಂತಗಳ ಬಾಗಿಲುಗಳನ್ನು ತೆರೆಸಿದ ಲೇಖಕ. ಕ್ರಿಯಾಶೀಲತೆ ಮತ್ತು ಚಲನಶೀಲತೆ ಅವರ ಸಾಹಿತ್ಯದ ಕೇಂದ್ರ ಆಶಯ. ವ್ಯಕ್ತಿ ವಿಶಿಷ್ಟ ಸಿದ್ಧಾಂತದಿಂದ ಜೀವಕೇಂದ್ರಿತ ಜಗತ್ತಿನ ಶೋಧದ ಕಡೆಗೆ ಅವರ ಸಾಹಿತ್ಯ ವಿಕಾಸವಾಗುತ್ತ ಬೆಳೆಯುತ್ತದೆ. ತಮ್ಮ ಅನುಭವಗಳನ್ನೇ ಕಥನಗಳನ್ನಾಗಿಸಿ, ಅದಕ್ಕೆ ಹೊಸ ವೈಚಾರಿಕತೆ, ದಾರ್ಶನಿಕತೆ ಹಾಗೂ ಉಜ್ವಲ ಕಾಂತಿಯನ್ನು ದೊರಕಿಸಿಕೊಟ್ಟ ಕನ್ನಡದ ಅಪರೂಪದ ಲೇಖಕ ತೇಜಸ್ವಿ.
ಅವರ ಸಾಹಿತ್ಯದ ಅಭಿವ್ಯಕ್ತಿ ವಿಧಾನ, ಸ್ವರೂಪ, ಕಥನಕ್ರಮ, ಭಾಷೆಯ ಬಳಕೆ, ಹೊಸ ನುಡಿಗಟ್ಟುಗಳ ಶೋಧ ತಮ್ಮ ಎಲ್ಲ ಬರಹಗಳಲ್ಲಿ ನಿರಂತರವಾಗಿ ಅನ್ವೇಷಣೆಗೆ ಒಳಪಟ್ಟಿದ್ದವು ಎಂಬುದಕ್ಕೆ ಅವರ ಅಗಾಧ ಕೃತಿಗಳೇ ಸಾಕ್ಷಿಯಾಗಿವೆ. ಅನುವಾದ, ಚಿತ್ರಕಲೆ, ಫೋಟೋಗ್ರಫಿ, ಸಿತಾರ್ ವಾದನ , ಸಂಗೀತ ಆಸ್ವಾದನೆ, ಮೀನು ಶಿಕಾರಿ, ಬೇಟೆ, ಪಕ್ಷಿ ವೀಕ್ಷಣೆ, ಕೃಷಿ, ಯಂತ್ರ ರಿಪೇರಿ, ಚಾರಣ, ಕಂಪ್ಯೂಟರ್ ಬಗೆಗಿನ ಕುತೂಹಲ ಹಾಗೂ ಅದರ ಬಳಕೆಯ ಸಾಧ್ಯತೆಗಳು, ಅಡುಗೆ ಹೀಗೆ ಹತ್ತು ಹಲವು ಇವರ ಆಸಕ್ತಿ, ಅಭಿರುಚಿ, ಕುತೂಹಲಗಳಾಗಿದ್ದವು. ಹಾಗಾಗಿ ತೇಜಸ್ವಿ ಎಂದರೇನೆ ಒಂದು ವಿಸ್ಮಯ, ನಿಗೂಢ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications