ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ತೆರೆಮರೆಯಲ್ಲಿ ಸಿಟಿ ರವಿ ವಿರೋಧ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 15: ಲೋಕಸಭೆ ಚುನಾವಣೆ ಬೆನ್ನಲ್ಲೇ ಚಿಕ್ಕಮಗಳೂರಿನ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ತೆರೆಮರೆಯಲ್ಲಿ ಸಿಟಿ ರವಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಟಿ ರವಿ ಅವರ ಆಪ್ತರಾದ ನಗರಸಭಾ ಸದಸ್ಯರು ಹಾಗೂ ಬಿಜೆಪಿ ಮುಖಂಡರುಗಳಿಂದ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. "ಬಸ್ ಚಾರ್ಜ್ ಹಾಕಿಕೊಂಡು ಬೆಂಗಳೂರಿಗೆ ಹೋಗಿ ಸಂಸದರನ್ನ ಹುಡುಕಲು ನಮ್ಮಿಂದ ಸಾಧ್ಯವಿಲ್ಲ. ಇದುವರೆಗೂ ಯಾವುದೇ ಸಭೆಗಳಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಭಾಗಿಯಾಗಿಲ್ಲ" ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

This constituency does not require Shobha Karandlaje:BJP activists

ಮೋದಿ ವಿಶ್ವವಿದ್ಯಾಲಯದಲ್ಲಿ ಶೋಭಾ ಕರಂದ್ಲಾಜೆ ಫೇಲ್!ಮೋದಿ ವಿಶ್ವವಿದ್ಯಾಲಯದಲ್ಲಿ ಶೋಭಾ ಕರಂದ್ಲಾಜೆ ಫೇಲ್!

ಈ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅವಶ್ಯಕತೆ ಇಲ್ಲ ಎಂದು ಜನ ಹೇಳುತ್ತಿದ್ದಾರೆ. ಸ್ಥಳೀಯರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಬಿಜೆಪಿ ಮುಖಂಡರ ಜೊತೆಗೆ ಚರ್ಚೆ ಮಾಡುತ್ತೇವೆ.
ಎಂದು ಚಿಕ್ಕಮಗಳೂರು ನಗರ ಬಿಜೆಪಿ ಮುಖಂಡರು ಪತ್ರಿಕಾ ಗೋಷ್ಠಿಯಲ್ಲಿ ಇಂದು ಶುಕ್ರವಾರ ತಿಳಿಸಿದ್ದಾರೆ.

This constituency does not require Shobha Karandlaje:BJP activists

 ಶೋಭಾ ಕರಂದ್ಲಾಜೆ ವಿರುದ್ಧ ಅಮಿತ್‌ ಶಾಗೆ ಟೆಕ್ಕಿಗಳ ಪತ್ರ! ಶೋಭಾ ಕರಂದ್ಲಾಜೆ ವಿರುದ್ಧ ಅಮಿತ್‌ ಶಾಗೆ ಟೆಕ್ಕಿಗಳ ಪತ್ರ!

ನಗರ ಸಭೆ ಅಧ್ಯಕ್ಷೆ ಶಿಲ್ಪ ರಾಜಶೇಖರ್ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆದಿದ್ದು, ನಗರಸಭೆ ಸದಸ್ಯರುಗಳು ಹಾಗೂ ಬಿಜೆಪಿ ಪ್ರಮುಖ‌ ಮುಖಂಡರುಗಳ ಜೊತೆ ಕಳೆದ ಕೆಲ ದಿನಗಳ‌ ಹಿಂದೆ ಜಯಪ್ರಕಾಶ್ ಹಗ್ಡೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

English summary
MLA CT Ravi opposed indirectly Shobha Karandlaje contest in Lok Sabha Elections 2019.BJP activists expressed displeasure in today press meet at Chikkamagaluru. They said this constituency does not require Shobha Karandlaje.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X