ಮೂಡಿಗೆರೆಯಲ್ಲಿ ನಿಯಂತ್ರಣ ತಪ್ಪಿ ನೀರಿಗೆ ಬಿದ್ದ ಕಾರು; ಬೆಂಗಳೂರಿನ ಮೂವರ ಸಾವು
ಚಿಕ್ಕಮಗಳೂರು, ಅಕ್ಟೋಬರ್ 25: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳದಲ್ಲು ಮಗುಚಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಬಳಿ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಹೀಗಾಗಿ ರಸ್ತೆ ಪಕ್ಕದಲ್ಲಿನ ನೀರಿನ ಹಳ್ಳಕ್ಕೆ ಕಾರು ಉರುಳಿ ಬಿದ್ದಿದೆ. ಅದರಲ್ಲಿದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶೋಧ (82), ಪ್ರಕಾಶ್ (61), ಅನಿರುದ್ದ (24) ಮೃತಪಟ್ಟವರು.
ಅನುರೂಪ (19), ನರಸಿಂಗರಾವ್ (91) ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಮೂಡಿಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ಬೆಂಗಳೂರಿನ ಹೆಬ್ಬಾಳ ಮೂಲದವರು ಎಂದು ತಿಳಿದುಬಂದಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications