ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ಮಾರ್ಗದ ರಸ್ತೆಯಲ್ಲಿ ಪ್ರವಾಸಿಗರ ಪುಂಡಾಟ

ಚಿಕ್ಕಮಗಳೂರು, ಆಗಸ್ಟ್‌, 17: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ದೇವರ ಮನೆ ಮಾರ್ಗದ ರಸ್ತೆಯಲ್ಲಿ ಪ್ರವಾಸಿಗರು ಮೋಜು ಮಸ್ತಿಗೆ ಮುಂದಾಗಿದ್ದು, ಇದಕ್ಕೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮೂಡಿಗೆರೆ ತಾಲೂಕಿನ ದೇವರಮನೆ ಶ್ರದ್ಧಭಕ್ತಿಯ ಕೇಂದ್ರದ ಜೊತೆಗೆ ಪ್ರಮುಖ ಪ್ರವಾಸಿತಾಣವೂ ಆಗಿದೆ. ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿಗೆ ಬರುವ ಪ್ರವಾಸಿಗರು ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿಕೊಂಡು ನೃತ್ಯ ಮಾಡುವುದು ಅಲ್ಲದೆ ಅಸಭ್ಯವಾಗಿ ವರ್ತಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅಲ್ಲದೆ ರಸ್ತೆಯಲ್ಲಿ ಬರುವ ವಾಹನಗಳಿಗೆ ಅಡ್ಡಹಾಕುವ ಮೂಲಕ ಪುಂಡಾಟ ಮೆರೆಯುತ್ತಿದ್ದಾರೆ.

Tourists dance on road of Chikmagalur districts famous tourist spot Devara Mane

ಈ ಹಿಂದೆ ಚಾರ್ಮಾಡಿಘಾಟಿ ಪ್ರದೇಶದಲ್ಲಿನ ಚಿಕ್ಕಮಗಳೂರು ಮಂಗಳೂರು ರಸ್ತೆಯಲ್ಲಿ ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿಕೊಂಡು ಅಸಭ್ಯವಾಗಿ ಡ್ಯಾನ್ಸ್ ಮಾಡುವುದು, ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ದೂರುಗಳು ಕೇಳಿಬಂದಿದ್ದವು. ಬಳಿಕ ಇಲ್ಲಿಗೆ ಪೊಲೀಸ್ ಗಸ್ತು ಹೆಚ್ಚಿಸಿ ಪ್ರವಾಸಿಗರ ಅಸಭ್ಯ ವರ್ತನೆಗೆ ಕಡಿವಾಣ ಹಾಕಲಾಗಿತ್ತು.

ಇದೀಗ ಮತ್ತೆ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲೊಂದಾಗಿರುವ ದೇವರ ಮನೆಗೆ ಸಾಗುವ ಮಾರ್ಗದಲ್ಲಿ ಪ್ರವಾಸಿಗರು ಅಸಭ್ಯ ವರ್ತನೆ ತೋರುತ್ತಿದ್ದು, ಇದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕೆಂದು ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.

ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ಪುಂಡಾಟ

ಇನ್ನು ಇತ್ತೀಚೆಗಷ್ಟೇ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಹುತೇಕ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ ಕೆಲವೆಡೆ ಬೆಟ್ಟ, ಗುಡ್ಡಗಳು ಕೂಡ ಕುಸಿದಿವೆ. ಆದ್ದರಿಂದ ಮುಂಜಾಗ್ರತೆಗಾಗಿ ಯಾವುದೇ ಅನಾಹುತಗಳು ಸಂಭವಿಸಬಾರದು ಅನ್ನುವ ನಿಟ್ಟಿನಲ್ಲಿ ಮಳೆ ಕಡಿಮೆಯಾಗುವವರೆಗೂ ಜಿಲ್ಲೆ ಪ್ರವಾಸ ನಿಲ್ಲಿಸಿ ಎಂದು ಚಿಕ್ಕಮಗಳೂರು ಎಸ್‌ಪಿ ಪ್ರವಾಸಿಗರಲ್ಲಿ ಮನವಿ ಮಾಡಿದ್ದರು. ಆದರೂ ಕೂಡ ಇಂದು ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರು ಪುಂಡಾಟ ಮೆರೆದಿದ್ದರು.

ಪ್ರವಾಸಿಗರು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಡೇಂಜರ್ ಬಂಡೆ ಮೇಲೆ ಹತ್ತಿ ಸೆಲ್ಪೀ ಕ್ಲಿಕ್ಕಿಸಿಕೊಳ್ಳುವ ಮೂಲಕ ಹುಚ್ಚಾಟ ಮೆರೆದಿದ್ದರು. ಇಲ್ಲಿಂದ ಸ್ವಲ್ಪ ಜಾರಿದರೂ ದೊಡ್ಡ ಮಟ್ಟದ ಅಪಾಯ ಸಂಭವಿಸುವುದಂತೂ ಗ್ಯಾರಂಟಿ. ಈಗಾಗಲೇ ರೀಲ್ಸ್‌ ಮಾಡಲು ಹೋಗಿ ಯುವಕನೊಬ್ಬ ಜಲಪಾತದಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆಯೂ ನಡೆದಿತ್ತು.

ಜಿಲ್ಲಾಡಳಿತ, ಪೊಲೀಸ್ ಬೇಡ ಅಂತಾ ಮನವಿ ಮಾಡಿದ್ದರೂ ಕೂಡ ಪ್ರವಾಸಿಗರು ಮಾತ್ರ ಚಾರ್ಮಾಡಿ ಘಾಟಿಯ ಅಪಾಯದ ಸ್ಥಳದಲ್ಲಿರುವ ಕಲ್ಲು, ಬಂಡೆಗಳ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳುವ ಕ್ರೇಜಿಗೆ ಬಿದ್ದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+