ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಸೆಲ್ಫಿ ಕ್ರೇಜ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜೂನ್ 18: ನಿಷೇಧದ ನಡುವೆಯೂ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರ ಸೆಲ್ಫಿ ಕ್ರೇಜ್ ಮುಂದುವರೆದಿದೆ.

Recommended Video

Solar Eclipse June 21 2020 : Sunday darshan timing changed in Kukke Subramanya | Oneindia Kannada

ಕಳೆದೆರಡು ವರ್ಷಗಳಲ್ಲಿ ಚಾರ್ಮಾಡಿ ಮಾರ್ಗದಲ್ಲಿ ಸೆಲ್ಫಿ ಕ್ರೇಜಿಗೆ ಅನೇಕ ಸಾವು-ನೋವು ಕೂಡ ಸಂಭವಿಸಿವೆ. ಕಳೆದ ವರ್ಷ ಕೂಡ ಪ್ರವಾಸಿಗನೋರ್ವ ಬಂಡೆ ಮೇಲಿಂದ ಜಾರಿ ಬಿದ್ದು ಕೈ ಮುರಿದುಕೊಂಡಿದ್ದ. ಈಗ ಈ ಮಾರ್ಗವಾಗಿ ಸಂಚರಿಸುವ ಪ್ರವಾಸಿಗರು ಮತ್ತದೇ ತಪ್ಪುಗಳನ್ನು ಮಾಡುತ್ತಿದ್ದಾರೆ.

ಚಿಕ್ಕಮಗಳೂರು: ರಾತ್ರೋರಾತ್ರಿ ಸ್ವಾಮಿ ವಿವೇಕಾನಂದ ಮೂರ್ತಿ ನೆಲಸಮಚಿಕ್ಕಮಗಳೂರು: ರಾತ್ರೋರಾತ್ರಿ ಸ್ವಾಮಿ ವಿವೇಕಾನಂದ ಮೂರ್ತಿ ನೆಲಸಮ

 Chikkamagaluru: Tourists Take Selfie In Charmedi Ghat

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಚಾರ್ಮಾಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. 22 ಕಿ.ಮೀ. ಚಾರ್ಮಾಡಿಯ ಮಧ್ಯೆ ಅಲ್ಲಲ್ಲಿ ಸಣ್ಣ ಜಲಪಾತಗಳು ಸೃಷ್ಠಿಯಾಗಿವೆ. ಪ್ರವಾಸಿಗರು ಎಲ್ಲೆಂದರಲ್ಲಿ ಗಾಡಿ ನಿಲ್ಲಿಸಿ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ಫೋಟೋ ಸೆಷೆನ್ ನಡೆಸುತ್ತಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಗಾಳಿ ಸಹಿತ ಭಾರೀ ಮಳೆಚಾರ್ಮಾಡಿ ಘಾಟ್ ನಲ್ಲಿ ಗಾಳಿ ಸಹಿತ ಭಾರೀ ಮಳೆ

 Chikkamagaluru: Tourists Take Selfie In Charmedi Ghat

ಈ ಚಾರ್ಮಾಡಿ ಮಾರ್ಗದಲ್ಲಿ ಎಲ್ಲೂ ಸೆಲ್ಫಿ ತೆಗೆಯಲು ಅವಕಾಶವಿಲ್ಲ. ಇಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸರ್ಕಾರ ನಿಷೇಧಿಸಿದೆ. ಆದರೆ, ಪ್ರವಾಸಿಗರು ಅಪಾಯದ ಸ್ಥಳಗಳಲ್ಲಿ ಮತ್ತು ಬಂಡೆಗಳ ಮೇಲೆ ಹತ್ತಿ ಸೆಲ್ಫಿಗೆ ಮುಗಿ ಬೀಳುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

English summary
Despite the ban, tourists' selfie craze continues in the Charmadi Ghat of the Mudigere Taluk, which connects the Chikkamagaluru-Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X