ಕೊಪ್ಪ: 750 ರೂ. ಸಾಲದ ಶೂಲಕ್ಕೆ ಸಿಲುಕಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಮಗಳೂರು, ಆಗಸ್ಟ್, 28: ಕೇವಲ 750 ರೂಪಾಯಿ ಸಾಲದ ಶುಲಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಖಾಸಗಿ ಶಾಲೆಯಲ್ಲಿ ನಡೆದಿದೆ.
ಶ್ರೀನಿವಾಸ್ ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿ. ಈತ ಮೂಲತಃ ಕಡೂರು ತಾಲೂಕಿನ ಹಿರೇಬಳ್ಳೇಕೆರೆ ಗ್ರಾಮದವನಾಗಿದ್ದಾನೆ. ಇನ್ನು ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಯೋಧನ ಆಕ್ರಂದನ ಮುಗಿಲು ಮುಟ್ಟಿದೆ. ಶ್ರೀನಿವಾಸ್ ಆಗಸ್ಟ್ 22ರಂದು ಕೊಪ್ಪದ ಖಾಸಗಿ ಶಾಲೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿ ಬರೆದಿಟ್ಟ ಡೆತ್ ನೋಟ್ ಇದೀಗ ವೈರಲ್ ಆಗಿದ್ದು, ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಗೆ ಸಾಲ ಕೊಟ್ಟು ಕಿರುಕುಳ ನೀಡಿದ್ದಾರಾ ಎನ್ನುವ ಅನುಮಾನಗಳು ಕೂಡ ವ್ಯಕ್ತವಾಗುತ್ತಿವೆ. ಅಲ್ಲದೆ ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿಗೆ 750 ರೂಪಾಯಿ ಸಾಲ ಕೊಟ್ಟು ಮೂರು ಸಾವಿರ ರೂಪಾಯಿ ಹಣ ಕೇಳಿರುವ ಆರೋಪವೊಂದು ಕೇಳಿಬಂದಿದೆ.
ಇನ್ನು ಸಾವಿಗೀಡಾದ ವಿದ್ಯಾರ್ಥಿ ಶ್ರೀನಿವಾಸ್ ಪೋಷಕರು ಮಾತನಾಡಿ, ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಕಣ್ಣೀರಿಡುತ್ತಾ ಕೇಳಿಕೊಂಡಿದ್ದಾರೆ.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )












Click it and Unblock the Notifications