ಅಪಘಾತ; ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಇಬ್ಬರ ಸಾವು

ಚಿಕ್ಕಮಗಳೂರು, ಜೂನ್ 27: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು ಮೂಲದ ಮಂಜುನಾಥ್ (30) ಮುತ್ತು ರಾಜ್ (28) ಅಪಘಾತದಲ್ಲಿ ಮೃತಪಟ್ಟವರು. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಜುನಾಥ್ ಹಾಗೂ ಸ್ನೇಹಿತರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದರು. ಆದರೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಅತಿ ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪಲ್ಟಿ ಹೊಡೆದು ರಸ್ತೆಗೆ ಉಜ್ಜಿಕೊಂಡ ಹೋದ ಪರಿಣಾಮ ಕಿಡಿ ಹಾರಿದೆ.

Two Dies In Car Accident At Chikkamagaluru While Going To Dharmastala

ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಂದ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+