• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರು: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪದಕ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಜನವರಿ 03: ಪೋಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಸಿಬ್ಬಂದಿಗಳಿಗೆ ಕೊಡಮಾಡುವ ಮುಖ್ಯಮಂತ್ರಿ ಪದಕಕ್ಕೆ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಚಿಕ್ಕಮಗಳೂರು ಡಿಸಿಐಬಿ ಪೊಲೀಸ್ ನಿರೀಕ್ಷಕ ಕೆ.ಸತ್ಯನಾರಾಯಣ್ ಹಾಗೂ ಚಿಕ್ಕಮಗಳೂರು ಉಪ ವಿಭಾಗದ ಡಿ.ಟಿ ಪ್ರಭು ಅವರಿಗೆ 2019ನೇ ಸಾಲಿನ ಸಿಎಂ ಪ್ರಶಸ್ತಿಯನ್ನು ಪ್ರಕಟಿಸಿದೆ.

ಕೆ.ಸತ್ಯನಾರಾಯಣ್ ಕಳೆದ 30 ವರ್ಷಗಳಿಂದ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ನಗರದ ಸಂಚಾರಿ ಠಾಣೆಯು ಸೇರಿದಂತೆ ವಿವಿಧ ಠಾಣೆಗಳಲ್ಲಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿದ ಕೇಂದ್ರ ಸರ್ಕಾರ 2018ರಲ್ಲಿ ರಾಷ್ಟ್ರಪತಿ ಪದಕ ನೀಡಿ ಗೌರವಿಸಿತ್ತು. ಇದೀಗ ಮುಖ್ಯಮಂತ್ರಿಗಳ ಪದಕಕ್ಕೂ ಭಾಜನರಾಗಿದ್ದಾರೆ.

ಇತ್ತೀಚೆಗೆ ಉಪ ವಿಭಾಗದ ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಟಿ ಪ್ರಭು ಮೂಲತಃ ಕಲ್ಬುರ್ಗಿಯವರು, ಈ ಹಿಂದೆ ಅವರು ಗೋಕಾಕ್‌ನಲ್ಲಿ ಸೇವೆ ಸಲ್ಲಿಸಿ ಜಿಲ್ಲೆಗೆ ವರ್ಗಾವಾಗಿ ಬಂದಿದ್ದು, ಈ ಇಬ್ಬರು ಅಧಿಕಾರಿಗಳು ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ.

English summary
Two police officers DCIB SP K Sathyanarayan and Sub Division officer D.T Prabhu were awarded with Chief Miniter's police Medal for Gallantry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X