ಬೈಕ್ ಸವಾರರ ಮೇಲೆ ಬಿದ್ದ ಕಾಡುಕೋಣ; ಸವಾರರಿಗೆ ಗಂಭೀರ ಗಾಯ
ಚಿಕ್ಕಮಗಳೂರು, ಜನವರಿ 02: ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಕಾಡುಕೋಣ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಬಾಳೂರು ಸಮೀಪದ ನೇರಂಕಿ ಗ್ರಾಮದ ಸಂದೀಪ್ ಹಾಗೂ ಮಂಗಳ ಬೈಕಿನಲ್ಲಿ ಹೋಗುತ್ತಿರುವಾಗ ಕಾಫಿ ತೋಟದ ಅಂಚಿನಿಂದ ಕಾಡು ಕೋಣವೊಂದು ಇದ್ದಕ್ಕಿದ್ದಂತೆ ರಸ್ತೆ ಮೇಲೆ ಹಾರಿದೆ. ಹೀಗೆ ಹಾರಿದ ಕೋಣ ನೇರವಾಗಿ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದಿದೆ. ಹೀಗಾಗಿ ಬೈಕ್ ನಲ್ಲಿರುವ ಇಬ್ಬರಿಗೂ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನ ಕಳಸ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications