• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರು; ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಯರ್ ಅಂಗಡಿ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಜೂನ್ 01: ಶಾರ್ಟ್ ಸರ್ಕ್ಯೂಟ್ ನಿಂದ ಟಯರ್ ಅಂಗಡಿಗೆ ಬೆಂಕಿ ಹೊತ್ತುಕೊಂಡು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.

ನಗರದ ಎನ್.ಎಂ.ಸಿ ಸರ್ಕಲ್ ನಲ್ಲಿ ಟಯರ್ ಅಂಗಡಿಯಿದ್ದು, ಶಾರ್ಟ್ ಸರ್ಕ್ಯೂಟ್ ಆಗಿ ಅಂಗಡಿಯಲ್ಲಿದ್ದ ಬಹುತೇಕ ಟಯರ್ ಗಳು ಸುಟ್ಟು ಭಸ್ಮವಾಗಿವೆ. ಬೆಂಕಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಆಹುತಿಯಾಗಿವೆ.

ಟೈಯರ್ ಬ್ಲಾಸ್ಟ್: ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್

ಮುಂಜಾನೆ 3:30ಕ್ಕೆ ಬೆಂಕಿ ಹತ್ತಿಕೊಂಡಿದ್ದು, ಸಂಪೂರ್ಣವಾಗಿ ಅಂಗಡಿಯೇ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿತ್ತು. ಸತತ ಎರಡು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆಯಿತು. icic ಮ್ಯೂಚುವಲ್ ಫಂಡ್ ಇನ್ಸುರೆನ್ಸ್ ಮಳಿಗೆಗೂ ಈ ಬೆಂಕಿ ತಗುಲಿದ್ದು, ಮಳಿಗೆಯಲ್ಲಿರುವ ದಾಖಲೆಗಳು ಸುಟ್ಟು ಭಸ್ಮವಾಗಿರುವ ಶಂಕೆ ವ್ಯಕ್ತವಾಗಿದೆ.

English summary
Fire broke out in tyre shop by short circuit in NMC Circle of chikkamagaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X