ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಕಳೆದುಕೊಂಡಿದೆ-ಶೋಭಾ ಕರಂದ್ಲಾಜೆ ವ್ಯಂಗ್ಯ

ಚಿಕ್ಕಮಗಳೂರು, ನವೆಂಬರ್‌ 6: ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಕಳೆದುಕೊಂಡಿದೆ. ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿಯವರು ಏನು ಸಾಬೀತು ಮಾಡಲು ಹೊರಟಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ದಲ್ಲಿ ಚುನಾವಣೆ ಘೋಷಣೆಯಾಗಿದೆ. ಸ್ವಾತಂತ್ರ್ಯ ಭಾರತದ ನಂತರ ಅನೇಕ ವರ್ಷ ಕಾಂಗ್ರೆಸ್ ಆಡಳಿತ ನಡೆಸಿತ್ತು. ಆದರೆ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಹುಡುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಜಕೀಯ ಪಕ್ಷ ಇರುವುದು ಚುನಾವಣೆಯನ್ನು ಎದುರಿಸಲು ಆದರೆ, ಚುನಾವಣೆ ಘೋಷಣೆಯಾದ ಬಳಿಕವು ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆಯನ್ನು ಯಾಕೆ ಮಾಡುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ, ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ವಿಸರ್ಜನೆ ಮಾಡಿ ಎಂದು ಹೇಳಿದರು. ಅಂದಿನಿಂದ ಹಿಂದಿನ ಕಾಂಗ್ರೆಸ್ ಸತ್ತು ಹೋಗಿದೆ. ಹೊಸ ಕಾಂಗ್ರೆಸ್ ದೇಶವನ್ನು ಮುನ್ನಡೆಸಲು ಬಂದಿದ್ದಾರೆ ಆದರೆ, ಅವರ ಅಸ್ತಿತ್ವವೇ ಇಲ್ಲ ಎಂದು ಎಂದು ಲೇವಡಿ ಮಾಡಿದರು.

ರಾಹುಲ್‌-ಪ್ರಿಯಾಂಕ ವಿರುದ್ಧ ಶೋಭಾ ಕರಂದ್ಲಾಜೆ ಲೇವಡಿ

ರಾಹುಲ್‌-ಪ್ರಿಯಾಂಕ ವಿರುದ್ಧ ಶೋಭಾ ಕರಂದ್ಲಾಜೆ ಲೇವಡಿ

ಮಾತು ಮುಂದುವರಿಸಿದ ಅವರು, ರಾಹುಲ್ ಗಾಂಧಿಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೂ ಸಂಪೂರ್ಣವಾಗಿ ವಿಫಲರಾದರು. ಪ್ರಿಯಾಂಕ ಗಾಂಧಿಯವರನ್ನು ಉತ್ತರ ಪ್ರದೇಶದಲ್ಲಿ ಚುನಾವಣೆಗೆ ನೇಮಕ ಮಾಡಲಾಯಿತು ಅಲ್ಲಿ ಒಂದು ಸೀಟು ಗೆಲ್ಲಲು ಸಾಧ್ಯವಾಗಲಿಲ್ಲ. 25-30 ವರ್ಷದಿಂದ ಒಂದು ಕುಟುಂಬದ ಅಧ್ಯಕ್ಷತೆಯನ್ನು ಬಿಡಿಸಿ ನಮ್ಮ ರಾಜ್ಯದವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಅವರು ಕಾಣಿಸಿಕೊಳ್ಳುತ್ತಿಲ್ಲ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮೂಲಕ ಏನು ಸಾಬೀತು ಮಾಡಲು ಹೊರಟಿದ್ದಾರೆಂದು ಅರ್ಥವಾಗುತ್ತಿಲ್ಲ ಎಂದು ಟೀಕಿಸಿದರು.

ಭಯೋತ್ಪಾದನೆ ಹೆಚ್ಚಾಗಲು ಕಾಂಗ್ರೆಸ್ ಕಾರಣ

ಭಯೋತ್ಪಾದನೆ ಹೆಚ್ಚಾಗಲು ಕಾಂಗ್ರೆಸ್ ಕಾರಣ

ಇನ್ನು ಭಾರತ ಜೋಡಿಸಬೇಕಿರುವುದು ಭಾರತದ ಒಳಗಲ್ಲ, ಭಾರತದ ಸೀಮೆಗಳಲ್ಲಿ. ಭಾರತದ ಗಡಿ ಪ್ರದೇಶದಲ್ಲಿರುವ ಗೊಂದಲಕ್ಕೆ ಭಯೋತ್ಪಾದನೆ ಹೆಚ್ಚಾಗಲು ಅಂದು ಕಾಂಗ್ರೆಸ್ ಪಕ್ಷ ತಗೆದುಕೊಂಡ ತಪ್ಪು ನಿರ್ಧಾರಗಳು ಕಾರಣ. ಭಾರತ್ ಜೋಡೋ ಅಗತ್ಯವಿರುವುದು ಗಡಿ ಪ್ರದೇಶದಲ್ಲಿ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅವರ ಮನೆಯನ್ನು ಮೊದಲು ಸರಿಮಾಡಿಕೊಳ್ಳಬೇಕಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಎರಡು ಗುಂಪುಗಳಲ್ಲಿ ಜನ ತಂದರು. ಅವರ ನಾಯಕರಲ್ಲಿ ಗೊಂದಲವಿದೆ. ಹೀಗಿರುವಾಗ ಡಿ.ಕೆ.ಶಿವಕುಮಾರ್ ಅವರು ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಲು ಬಿಡುತ್ತಾರ ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರ ಭ್ರಷ್ಟಚಾರ ನಡೆಸಿದ್ದರೇ ಸಾಕ್ಷಿ ಏನಿದೆ..?

ನಮ್ಮ ಸರ್ಕಾರ ಭ್ರಷ್ಟಚಾರ ನಡೆಸಿದ್ದರೇ ಸಾಕ್ಷಿ ಏನಿದೆ..?

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಪರಮೇಶ್ವರ್ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿಲ್ಲ. ಒಂದು ವರ್ಗವನ್ನು ಬಿಟ್ಟು ಎಲ್ಲವನ್ನೂ ಮಾಡುತ್ತಿದ್ದಾರೆ ಆದ್ದರಿಂದ ನಿಮ್ಮ ಮುಖ್ಯಮಂತ್ರಿ ಕನಸು ಕನಸ್ಸಾಗಿ ಉಳಿಯುತ್ತದೆ. ಅದಕ್ಕೆ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ. ನಿಮ್ಮ ತುಘಲಕ್ ದರ್ಬಾರ್, ಟಿಪ್ಪು ದರ್ಬಾರ್ ಆಡಳಿತವನ್ನು ಜನರು ನೋಡಿದ್ದಾರೆ. ಹೀಗಾಗಿ ಮತ್ತೆ ಅಧಿಕಾರ ನೀಡುವುದಿಲ್ಲ. ನಮ್ಮ ಸರ್ಕಾರ ಭ್ರಷ್ಟಾಚಾರ ನಡೆಸಿದ್ದರೇ ಸಾಕ್ಷಿ ಏನಿದೆ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡುವುದು ಸಾಮಾನ್ಯ, ಆಧಾರ ರಹಿತ ಆರೋಪವನ್ನು ಜನರು ಒಪ್ಪುವುದಿಲ್ಲ ಎಂದರು.

ಉಚಿತ ವಿದ್ಯುತ್ ಬಿಜೆಪಿ ಸರ್ಕಾರದ ಸಾಧನೆ

ಉಚಿತ ವಿದ್ಯುತ್ ಬಿಜೆಪಿ ಸರ್ಕಾರದ ಸಾಧನೆ

ಕಸ್ತೂರಿ ರಂಗನ್ ವರದಿ ಬಗ್ಗೆ ಸಂಸದರು ಬಾಯಿ ಬಿಡುತ್ತಿಲ್ಲ ಎನ್ನುವ ಕಾಂಗ್ರೆಸ್‌ ನಾಯಕ ಮಧುಬಂಗಾರಪ್ಪ ಪ್ರಶ್ನೆಗೆ ಉತ್ತರಿಸಿದ ಶೋಭಾ ಕರಂದ್ಲಾಜೆ, ಕಸ್ತೂರಿ ರಂಗನ್ ವರದಿ ಕಾಂಗ್ರೆಸ್ ಕೂಸು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರದಿಯಿಂದ ರೈತರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ನಿರ್ಧಾರ ತಗೆದುಕೊಂಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿದ್ದು, ರೈತರು ಜನವಸತಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಿದ್ಯುತ್ ಖಾಸಗೀಕರಣ ಸಂಬಂಧ ಮಧು ಬಂಗಾರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿ, ಆ ರೀತಿಯ ಯಾವ ಸುತ್ತೋಲೆ ಬಂದಿಲ್ಲ. ಚುನಾವಣೆ ಸಂದರ್ಭದಲ್ಲಿ ಆರೋಪ ಹೊರಿಸಿ ಜನರನ್ನು ಗೊಂದಲಕ್ಕೆ ಸಿಲುಕಿಸಬೇಕು ಎಂಬ ಉದ್ದೇಶ ಅವರಲ್ಲಿದ್ದು, ಉಚಿತ ವಿದ್ಯುತ್ ನೀಡಿದ್ದರೆ, ಅದು ಬಿಜೆಪಿ ಸರ್ಕಾರದ ಸಾಧನೆ, ಕಾಂಗ್ರೆಸ್ ಮುಖಂಡರು ಏನನ್ನು ಮಾಡಿಲ್ಲ. ಆದರೆ ಆರೋಪ ಮಾಡುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವ್ಯಂಗ್ಯವಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+