ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸಿ ಆದೇಶದ ಮೇರೆ ಪಿಎಫ್‌ಐ ಮುಖಂಡರ ಮನೆ ಮೇಲೆ ವಿವಿಧ ಇಲಾಖೆ ಅಧಿಕಾರಿಗಳು ದಾಳಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಸೆಪ್ಟೆಂಬರ್ 29: ನಿಷೇಧಿತ ಪಿಎಫ್ಐ ಹಾಗೂ ಎಸ್‌ಡಿಪಿಐ ಜಿಲ್ಲಾಧ್ಯಕ್ಷರ ಮನೆ ಮೇಲೆ ಜಿಲ್ಲಾಧಿಕಾರಿಗಳ ಸರ್ಚ್‌ ವಾರೆಂಟ್‌ ಆದೇಶದ ಮೇರೆಗೆ ವಿವಿಧ ಇಲಾಖೆಗಳ ನಿರ್ದೇಶಕರು ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರು ವಿಜಯಪುರದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಜಿಲ್ಲಾಧ್ಯಕ್ಷ ಚಾಂದ್ ಬಾಷಾ ಹಾಗೂ ಪಿಎಫ್‌ಐನ ಸಕ್ರಿಯ ಕಾರ್ಯಕರ್ತ ಆರಿಫ್‌ ಮನೆ ಮೇಲೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಕೆ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದ ಬೆನ್ನಲ್ಲೇ ಮನೆ ಮೇಲೆ ದಾಳಿ ಮಾಡಿ ದಾಖಲೆಗಳಿಗಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Breaking: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದ್ದ ಮುಖ್ಯ ಶಿಕ್ಷಕ ಅಮಾನತುBreaking: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದ್ದ ಮುಖ್ಯ ಶಿಕ್ಷಕ ಅಮಾನತು

ಇನ್ನು ಕಳೆದ ವಾರ ಎನ್‌ಐಎ ಹಾಗೂ ಪೊಲೀಸ್ ದಾಳಿ ನಂತರ ಪಿಎಫ್‌ಐ ಕಾರ್ಯಕರ್ತ ಆರಿಫ್‌ಗೆ ಠಾಣೆಗೆ ಆಗಮಿಸುವಂತೆ ಸೂಚಿಸಲಾಗಿತ್ತು. ಆದರೆ ಆತ ಹಾಜರಾಗದ ಹಿನ್ನಲೆಯಲ್ಲಿ ಗುರುವಾರ ಆತನ ಮನೆ ಮೇಲೆ ದಾಳಿ ನಡೆಸಲಾಗಿದೆ.

Various Department officials Raided the house of the PFI leaders in Chikkamagaluru

ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪಿಎಫ್‌ಐ ಜಿಲ್ಲಾಧ್ಯಕ್ಷ ಚಾಂದ್ ಪಾಷಾ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಪಿಎಫ್ಐ ಚಟುವಟಿಕೆ ಸಂಬಂಧ ಮಾಹಿತಿ ಕಲೆ ಹಾಕಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎಸ್‌ಡಿಪಿಐ ಸಂಘಟನೆಯ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ದೇಶಾದ್ಯಂತ ಕೇಂದ್ರೀಯ ತನಿಖಾ ತಂಡಗಳ ಸರಣಿ ದಾಳಿಗಳ ಬೆನ್ನಲ್ಲೇ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಅನ್ನು ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧಿಸಿ ಬುಧವಾರ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಭಯೋತ್ಪಾದನೆಗೆ ನಿಧಿ ಸಂಗ್ರಹದ ಆರೋಪದ ಹಿನ್ನೆಲೆ ಪಿಎಫ್ಐಗೆ ಸಂಬಂಧಿಸಿದ ಅನೇಕರನ್ನು ಈಗಾಗಲೇ ರಾಷ್ಟ್ರೀಯ ತನಿಖಾ ತಂಡವು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದರ ಮಧ್ಯೆ ಕೇಂದ್ರ ಗೃಹ ಸಚಿವಾಲಯವು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಿಎಫ್ಐ ಅನ್ನು ನಿಷೇಧಿಸಿದೆ.

ಇದರ ಜೊತೆಗೆ ಪಿಎಫ್ಐಯ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಅನ್ನು ಸಹ ನಿಷೇಧಿಸಲಾಗಿದೆ.

English summary
The directors of various departments have raided the house of the banned organizations PFI and the SDPI district president on the search warrant order by DESC in Chikkamagaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X