ವಿನಯ್ ಗುರೂಜಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್ ತೆರೆದು ಹಣಕ್ಕೆ ಬೇಡಿಕೆ
ಚಿಕ್ಕಮಗಳೂರು, ಮೇ, 23: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮದ ಅವಧೂತ ಅಂತಲೇ ಪ್ರಸಿದ್ಧಿ ಪಡೆದಿರುವ ವಿನಯ್ ಗುರೂಜಿ ಹೆಸರಿನಲ್ಲಿ ಕೆಲ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿದ್ದಾರೆ. ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
ಕಿಡಿಗೇಡಿಗಳು ಮೆಸೆಂಜರ್, ಫೇಸ್‌ಬುಕ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವಂತಹ ಸಂದೇಶಗಳನ್ನು ರವಾನಿಸುತ್ತಿರುವುದು ಇದೀಗ ಬೆಳಕಿದೆ ಬಂದಿದೆ. ಭಯ ಹುಟ್ಟಿಸಿ ಹಣ ವಸೂಲಿ ಮಾಡುತ್ತಿರುವ ಆರೋಪವೂ ಕೂಡ ಕೇಳಿಬಂದಿದೆ. 45 ದಿನದೊಳಗೆ ನಿಮಗೆ ಗಂಡಾತರ ಕಾದಿದೆ ಅನ್ನುವ ರೀತಿ ಮೆಸೇಜ್ ಮಾಡುವ ಮೂಲಕ ಜನರಿಗೆ ಭಯ ಹುಟ್ಟಿಸುತ್ತಿದ್ದಾರೆ ಎಂದು ಹಲವರ ಆರೋಪವಾಗಿದೆ.

ಇನ್ನು ಈ ಬಗ್ಗೆ ಸ್ವತಃ ವಿನಯ್ ಗುರೂಜಿಯೇ ಪ್ರತಿಕ್ರಿಯಿಸಿದ್ದು, ಆಶ್ರಮಕ್ಕೂ ಈ ಅಕೌಂಟ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಫೇಕ್ ಅಕೌಂಟ್‌ನಿಂದ ಹಣ ಕೇಳಿದರೆ ದೂರು ನೀಡಿ ಎಂದು ಜನರಿಗೆ ಮನವಿ ಮಾಡಿದರು. ಈ ಮೂಲಕ ಗುರೂಜಿ ಅವರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.












Click it and Unblock the Notifications