ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಕ್ಕಲಿಗ ಸಂಘದ ಚುನಾವಣೆ; ಚಿಕ್ಕಮಗಳೂರಲ್ಲಿ ಎ.ಪೂರ್ಣೇಶ್ ಗೆಲುವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 15; ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಿಂದ ಎ. ಪೂರ್ಣೇಶ್ 1,158 ಮತಗಳ‌ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಬಿ. ಎಲ್. ಸಂದೀಪ್ 3,270 ಮತಗಳನ್ನು ಪಡೆದಿದ್ದಾರೆ. ಬ್ಯಾರವಳ್ಳಿ ನಾಗರಾಜು 1,388 ಮತ, ಐ. ಪಿ. ನವೀನ್ ಕುಮಾರ್ 49 ಮತಗಳನ್ನು ಪಡೆದಿದ್ದಾರೆ. 47 ಮತಗಳು ಚುನಾವಣೆಯಲ್ಲಿ ತಿರಸ್ಕೃತಗೊಂಡಿವೆ.

ಚಿಕ್ಕಮಗಳೂರು; ವಾರಾಂತ್ಯ ಈ ಪ್ರವಾಸಿ ತಾಣಗಳಿಗೆ ಪ್ರವೇಶವಿಲ್ಲ ಚಿಕ್ಕಮಗಳೂರು; ವಾರಾಂತ್ಯ ಈ ಪ್ರವಾಸಿ ತಾಣಗಳಿಗೆ ಪ್ರವೇಶವಿಲ್ಲ

ಕಲ್ಲೇಶ್ವರ ಪ್ರಿಂಟಿಂಗ್ ಪ್ರೆಸ್‌ನ ಎ. ಪೂರ್ಣೇಶ್ 1,158 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.

ಪರಿಷತ್ ಚುನಾವಣೆ ಲೆಕ್ಕಾಚಾರ ತಪ್ಪಿದೆ; "ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಮ್ಮ ಲೆಕ್ಕಾಚಾರ ತಪ್ಪಿದೆ ಈ ಬಗ್ಗೆ ಪಕ್ಷದ ಆಂತರಿಕ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಹಾಗೂ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು" ಎಂದು ಬಿಜೆಪಿ ಮುಖಂಡ ಎಚ್. ಡಿ. ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರಲ್ಲಿ 6 ಮತದ ಸೋಲು; ಕಾಂಗ್ರೆಸ್‌ ಕೋರ್ಟ್‌ಗೆ!ಚಿಕ್ಕಮಗಳೂರಲ್ಲಿ 6 ಮತದ ಸೋಲು; ಕಾಂಗ್ರೆಸ್‌ ಕೋರ್ಟ್‌ಗೆ!

ಬುಧವಾರ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, "ನಮ್ಮ‌ ಪಕ್ಷದ 1400 ಕಾರ್ಯಕರ್ತರು ಇದ್ದರೂ ಸಹ ನಮ್ಮ ಅಭ್ಯರ್ಥಿಗೆ 1,188 ಮತಗಳು ಬಿದ್ದಿದ್ದು 200 ಮತಗಳು ಎದುರು ಪಕ್ಷದ ಅಭ್ಯರ್ಥಿಗೆ ಬಿದ್ದಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು" ಎಂದರು.

Infographic; ವಿಧಾನ ಪರಿಷತ್‌ನಲ್ಲಿ ಪಕ್ಷಗಳ ಬಲಾಬಲInfographic; ವಿಧಾನ ಪರಿಷತ್‌ನಲ್ಲಿ ಪಕ್ಷಗಳ ಬಲಾಬಲ

"ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸದಿಂದ ಇದ್ದೆವು. ಈ ಚುನಾವಣೆ ಪಾಠ ಕಲಿಸಿದೆ ಈ ಹಿನ್ನೆಲೆಯಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಆತ್ಮವಿಶ್ವಾಸವನ್ನು ಬಿಟ್ಟು ಇದೊಂದು ಎಚ್ಚರಿಕೆ ಗಂಟೆ ಎಂದು ಭಾವಿಸಿ ಹಿಂದಿನಂತೆ ತಳಮಟ್ಟಕ್ಕೆ ಇಳಿದು ಕೆಲಸ ಮಾಡುತ್ತೇವೆ" ಎಂದು ತಿಳಿಸಿದರು.

tammaiah

35 ವಾರ್ಡ್‌ನಲ್ಲಿ ಸ್ಪರ್ಧೆ; ಡಿಸೆಂಬರ್ 27ರಂದು ನಗರಸಭೆ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಹಳೆ ಬೇರು ಹೊಸ ಚಿಗುರು ಆಧಾರದ ಮೇಲೆ ಹಿರಿಯರು, ಯುವಕರು, ಮಹಿಳೆಯರು, ಹಿಂದುಳಿದ ವರ್ಗ ಸೇರಿದಂತೆ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಬಿಜೆಪಿ ಟಿಕೆಟ್ ನೀಡಲಿದೆ.

"35 ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ವಿರೋಧ ಪಕ್ಷಗಳು ಒಟ್ಟಾಗಿ ಬಂದರೂ ಅಥವಾ ಬಿಡಿಬಿಡಿಯಾಗಿ ಬಂದರೂ ಸಹ ನಗರಸಭೆ ಚುನಾವಣೆಯಲ್ಲಿ ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯುವುದು ಶತಸಿದ್ಧ" ಎಂದು ಎಚ್. ಡಿ. ತಮ್ಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Vokkaligara Sangha Election A Poornesh Won In Chikkamagaluru

Recommended Video

Ganguly Statement: Rohit Sharma vs Virat Kohli ..ದಾದಾ ಸಪೋರ್ಟ್ ಯಾರಿಗೆ ಗೊತ್ತಾ!! | Oneindia Kannada

English summary
Karnataka Vokkaligara Sangha election result 2021. A. Proornesh won in Chikkamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X