Get Updates
Get notified of breaking news, exclusive insights, and must-see stories!

ಮೇ 7ರಂದು ಮತದಾನ: ಮದ್ಯ ಮಾರಾಟ ನಿರ್ಬಂಧ ಮಾಹಿತಿ

ಚಿಕ್ಕಮಗಳೂರು, ಮೇ 04: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತದಾನದ ಹಿನ್ನಲೆಯಲ್ಲಿ ಮದ್ಯ ಮಾರಾಟದ ಮೇಲೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಇವರು ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಿ ಆದೇಶಿಸಿದ್ದಾರೆ.

Voting On May 7th Liquor Shops To Remain Shut On These Days

ಪ್ರಸ್ತಾವನೆಯಲ್ಲಿನ ಅಂಶಗಳು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮದ್ಯ ಮಾರಾಟ ಹಾಗೂ ಮದ್ಯಪಾನವನ್ನು ನಿಷೇಧಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

ಲೋಕಸಭಾ ಚುನಾವಣೆ -2024ರ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಇರುವ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿ ದಿನಾಂಕ 7/5/2024ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯು ಮುಕ್ತ ಶಾಂತಿಯುತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಬೇಕೆಂಬ ಉದ್ದೇಶದಿಂದ ಮತದಾನ ಮುಕ್ತಾಯಗೊಳ್ಳುವ ಪೂರ್ವದ 48 ಗಂಟೆ ಅಂದರೆ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮದ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗಡಿಭಾಗದಲ್ಲಿನ 5 ಕಿ. ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಶುಷ್ಕ ದಿವಸವೆಂದು ಘೋಷಿಸಲು ಕೋರಲಾಗಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಪ್ರಕ್ರಿಯೆಯನ್ನು ನಡೆಸುವುದು ಅತೀ ಅವಶ್ಯವಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದ 5 ಕಿ. ಮೀ. ವ್ಯಾಪ್ತಿಯಲ್ಲಿ ಬರುವ ಮದ್ಯದ ಸನ್ನದುಗಳನ್ನು ಮುಚ್ಚುವುದು ಸೂಕ್ತವೆಂದು ಮನಗಂಡು ಈ ಆದೇಶ ಹೊರಡಿಸಲಾಗಿದೆ.

ಆದೇಶದ ವಿವರ: ಮೀನಾ ನಾಗರಾಜ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಈ ಕುರಿತು ಆದೇಶಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 135(ಸಿ) ಹಾಗೂ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10(ಬಿ) ರಡಿಯಲ್ಲಿ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ ಆದೇಶ ಹೊರಡಿಸಲಾಗಿದೆ.

ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಿಗೆ ಹೊಂದಿಕೊಂಡಿರುವ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದ 5 ಕಿ. ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬಾ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸದರಿ ವ್ಯಾಪ್ತಿ ಪ್ರದೇಶದಲ್ಲಿ ಎಲ್ಲಾ ರೀತಿಯಲ್ಲಿ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಏಪ್ರಿಲ್ 26ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನ ಮುಕ್ತಾಯಗೊಂಡಿದೆ. ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ಧಾರವಾಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+