ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾವು ಬಿಜೆಪಿ ನಾಯಕರ ಗುಲಾಮರಲ್ಲ: ಹಿಂದೂ ಕಾರ್ಯಕರ್ತರ ಎಚ್ಚರಿಕೆ!

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ, 29: ಚಿಕ್ಕಮಗಳೂರಿನಲ್ಲಿ ಪ್ರವೀಣ್‌ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ನಿಲುವುಗಳನ್ನು ಬಿಚ್ಚಿಡುವುದರ ಮೂಲಕ ಪ್ರವೀಣ್‌ ಹತ್ಯೆಗೆ ನ್ಯಾಯ ಕೊಡಿಸಿ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

"ಬಿಜೆಪಿ ನಾಯಕರೇ ನಿಮ್ಮನ್ನ ಗೆಲ್ಲಿಸೋದು ಗೊತ್ತು. ಸೋಲಿಸೋದು ಗೊತ್ತು. ನೀವು ಸರಿಯಾಗಿ ನಡೆಸಿದರೆ ಬೆನ್ನು ತಟ್ಟೋದು ಗೊತ್ತು. ದಾರಿ ತಪ್ಪಿದರೆ ಬೆನ್ನಿಗೆ ಬಾರಿಸೋದು ಗೊತ್ತು." ಹೀಗೊಂದು ವಾಟ್ಸಾಪ್ ಸ್ಟೇಟಸ್ ಮಲೆನಾಡು ಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹೀಗೆ ಸಂದೇಶ ಹಾಕುವ ಮೂಲಕ ಹಿಂದೂ ಕಾರ್ಯಕರ್ತರು ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ವಾಟ್ಸಾಪ್ ಸ್ಟೇಟಸ್ ಹಾಕುತ್ತಿರುವ ಮಲೆನಾಡಿನ ಹಿಂದೂ ಕಾರ್ಯಕರ್ತರು ಬಿಜೆಪಿ ರಾಜಕೀಯ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.

 ಧರ್ಮದ ಹೆಸರಲ್ಲಿ ಸಾವುಗಳಾದರೆ ರಾಜಕೀಯ ಲಾಭ ಎಂದು ಬಿಜೆಪಿ ನಂಬಿದೆ: ಎಚ್‌ಡಿಕೆ ಧರ್ಮದ ಹೆಸರಲ್ಲಿ ಸಾವುಗಳಾದರೆ ರಾಜಕೀಯ ಲಾಭ ಎಂದು ಬಿಜೆಪಿ ನಂಬಿದೆ: ಎಚ್‌ಡಿಕೆ

ನಾವು ಹಿಂದೂ ಕಾರ್ಯಕರ್ತರು. ರಾಜಕೀಯವಾಗಿ ಬಿಜೆಪಿಗೆ ಮತ ನೀಡಿದ್ದೇವೆ. ಪಕ್ಷಕ್ಕಾಗಿ ಯಾವುದೇ ಲಾಭವಿಲ್ಲದೆ, ಪ್ರತಿ ಫಲಾಪೇಕ್ಷೆ ಇಲ್ಲದೆ ಪ್ರಚಾರ ಮಾಡುತ್ತಿದ್ದೇವೆ. "ಹಾಗಂತ ಬಿಜೆಪಿ ನಾಯಕರ ಗುಲಾಮರಾಗಲು ಸಾಧ್ಯವಿಲ್ಲ." ನಮ್ಮ ನಿಷ್ಠೆ ಏನಿದ್ದರೂ ತತ್ವ-ಸಿದ್ಧಾಂತಕ್ಕೆ ಮಾತ್ರ ಎಂದು ಕಾರ್ಯಕರ್ತರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸದ್ಯ ಈ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಎಲ್ಲಾ ಕಡೆ ವೈರಲ್ ಆಗಿದೆ.

We Are Not Slaves of BJP Leaders: Hindu Activists Warn

ಹಿಂದೂ ಕಾರ್ಯಕರ್ತರ ಕಿಚ್ಚು

ಮಂಗಳೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದವು. ಬಿಜೆಪಿ ಸರ್ಕಾರದ ವಿರುದ್ಧವೇ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ಆರೋಪಿಗಳನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್‌ಗೆ ಬೆಂಬಲ ಸೂಚಿಸಿದ್ದರು. ಹೀಗೆ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬಾಳೆಹೊನ್ನೂರು ಜೆಸಿ ಸರ್ಕಲ್‌ನಲ್ಲಿ ರಸ್ತೆ ತಡೆದು ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ಹೊರಹಾಕಿದರು.

We Are Not Slaves of BJP Leaders: Hindu Activists Warn

ಇದೇ ವೇಳೆ ಮಾತನಾಡಿದ ಭಜರಂಗದಳದ ಜಿಲ್ಲಾ ಸಂಚಾಲಕ ಶಶಾಂಕ್ ಹಿಂದೂಗಳ ಕೊಲೆಗೆ ಸರ್ಕಾರವೆ ನೇರ ಕಾರಣ. ಹಿಂದುತ್ವದ ಹೋರಾಟದಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರ ಕೊಲೆಯಾಗುತ್ತಿದೆ. ಜಿಹಾದಿಗಳ ಮನಸ್ಥಿತಿ ಎದ್ದು ಕಾಣುತ್ತಿದೆ. ಕೂಡಲೇ ಸರ್ಕಾರ ಕಠಿಣ ನಿಲುವು ಕೈಗೊಂಡು ಹಿಂದುಗಳ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

English summary
Hindu activists have turned against the BJP government after condemning the killing of Praveen in Chikkamagalur. By exposing the government's position on social media, activists are demanding justice for Praveen Nettaru. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X