ಕರ್ತವ್ಯ ನಿರತ ವೈದ್ಯರ ಮೇಲೆ ಚಪ್ಪಲಿ ಎಸೆತ: ಮಹಿಳೆ ಬಂಧನ

ಚಿಕ್ಕಮಗಳೂರು, ಸೆಪ್ಟೆಂಬರ್‌ 10: ಚಿಕ್ಕಮಗಳೂರಲ್ಲಿ ವೈದ್ಯರ ಮೇಲೆ ಚಪ್ಪಲಿಯಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ಮೇಲೆ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಸ್ಲೀಮಾ ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ. ಕರ್ತವ್ಯ ನಿರತ ವೈದ್ಯರ ಮೇಲೆ ಚಪ್ಪಲಿ ಎಸೆದು, ಎಳೆದಾಡಿರುವ ಆರೋಪದ ಮೇಲೆ ತಸ್ಲೀಮಾ ಎನ್ನುವಾಕೆಯನ್ನು ಆಸ್ಪತ್ರೆಯಲ್ಲೇ ಬಂಧಿಸಲಾಗಿದೆ.

ವೈದ್ಯರ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಚಿಕ್ಕಮಗಳೂರು ನಗರ ಪೊಲೀಸರು ವಿಚಾರಣೆ ನಡೆಸಿ ಆಸ್ಪತ್ರೆಯಿಂದಲೇ ಮಹಿಳೆಯನ್ನ ಬಂಧಿಸಿ ಕರೆದೊಯ್ದಿದ್ದಾರೆ. ಸದ್ಯ ಪೊಲೀಸರು ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Woman Arrested After She Throwing Slippers To Doctors At Chikkamagaluru

ಘಟನೆಯ ಹಿನ್ನೆಲೆ ಏನು..?

ಕರ್ತವ್ಯ ನಿರತ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದು, ಎಳೆದಾಡಿರುವ ಘಟನೆ ನಿನ್ನೆ ಚಿಕ್ಕಮಗಳೂರಿನ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಗಲಾಟೆಯೊಂದರಲ್ಲಿ ಗಾಯವಾಗಿ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ತುರ್ತು ಚಿಕಿತ್ಸಾ ವಿಭಾಗದಲ್ಲಿ ತಪಾಸಣೆ ನಡೆಸುತ್ತಿದ್ದ ಮೂಳೆ ತಜ್ಞ ವೆಂಕಟೇಶ್, ಗಾಯಾಳು ಸಂಬಂಧಿಗಳು ಹೊರ ಹೋಗುವಂತೆ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಗಾಯಾಳು ಸಂಬಂಧಿ ತಸ್ಲೀಮಾ ವೈದ್ಯರ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾರೆ. ಅಲ್ಲದೇ ಚಪ್ಪಲಿ ತೆಗೆದು ಎಸೆದಿದ್ದಾಳೆ.

ವೈದ್ಯರ ಮೇಲೆ ಹಲ್ಲೆ ನಡೆಯುತ್ತಿದ್ದಂತೆ ಈ ಘಟನೆ ಖಂಡಿಸಿ ಜಿಲ್ಲಾಸ್ಪತ್ರೆ ವೈದರು ಮತ್ತು ಸಿಬ್ಬಂದಿ ಹೊರ ರೋಗಿ ವಿಭಾಗ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ವಿವಿಧ ಸಂಘಟನೆಗಳು ಸಾಥ್‌ ನೀಡಿದ್ದವು. ಆಟೋ ಚಾಲಕರ ಸಂಘ, ಕರವೇ, ಬಜರಂಗದಳ ಸೇರಿ ವಿವಿಧ ಸಂಘಟನೆಗಳು ಕೂಡಲೇ ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಮಹಿಳೆಯನ್ನು ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+