ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಪುತ್ರ ವಿಜಯೇಂದ್ರನ ಮುಂದೆ ಕಣ್ಣೀರಿಟ್ಟ ಮಹಿಳೆಯರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 15: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರನ ಮುಂದೆ ನಾಯ್ಯಕ್ಕಾಗಿ ಮಹಿಳೆ ಕಣ್ಣೀರಿಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆಯಿತು.

ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಬಿ.ವೈ ವಿಜಯೇಂದ್ರ ಅವರು ಚಿಕ್ಕಮಗಳೂರು ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಮುಂದೆ ಕಣ್ಣೀರು ಹಾಕಿದರು.

ಭದ್ರಾವತಿಗೆ ಬಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ ವಿಜಯೇಂದ್ರಭದ್ರಾವತಿಗೆ ಬಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ ವಿಜಯೇಂದ್ರ

ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪ ಚಿಕ್ಕಮಗಳೂರು ಮೂಲದ ಪ್ರಸನ್ನ ಜಮೀನು ಖರೀದಿ ಮಾಡಿದ್ದರು. 7 ವರ್ಷದ ಹಿಂದೆ ಪ್ರಸನ್ನ ಕುಟುಂಬ ಲಕ್ಕವಳ್ಳಿಯಲ್ಲಿ 50 ಎಕರೆ ಜಮೀನು ಖರೀದಿ ಮಾಡಿತ್ತು. ಈಗ ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ.

Woman cries In Front Of BY Vijayendra seeking justice

ಪ್ರಕರಣ ನ್ಯಾಯಾಲಯದಲ್ಲಿದ್ದರೂ, ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಸಿಎಂ ಪುತ್ರ ವಿಜಯೇಂದ್ರನ ಮುಂದೆ ಪ್ರಸನ್ನ ಕುಟುಂಬ ಕಣ್ಣೀರು ಹಾಕಿದರು.

ಯತ್ನಾಳ್ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ

ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿದ ಬಿ.ವೈ ವಿಜಯೇಂದ್ರ, ಯತ್ನಾಳ್ ಅವರು ಹಿರಿಯರಿದ್ದಾರೆ. ಅವತ್ತೆ ಹೇಳಿದ್ದೆ, ನನ್ನ ಬಗ್ಗೆ ಅವರಿಗೆ ಪ್ರೀತಿ ಇದೆ ಅಂತ, ಪ್ರೀತಿಯಿಂದ ಮಾತನಾಡುತ್ತಾರೆ, ಹಾಗಾಗಿ ನನಗೆ ಬೇಸರವಿಲ್ಲವೆಂದರು.

ನಾನು ಕೂಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ನಾನು ನರೇಂದ್ರ ಮೋದಿಯ ಬೆಂಬಲಿಗನೂ ಹೌದು, ಹಿಂದೂ ಕಾರ್ಯಕರ್ತನೂ ಹೌದು, ನನಗೆ ಹೆಮ್ಮೆ ಇದೆ ಎಂದು ಹೇಳಿದರು.

Woman cries In Front Of BY Vijayendra seeking justice

ಸಿಡಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ, ಸತ್ಯಾಸತ್ಯತೆ ಏನು ಅನ್ನೋದು ಇನ್ನೂ ಹೊರಬೇಕಾಗಿದ್ದು, ಇದರ ಹಿಂದೆ ಯಾರಿದ್ದಾರೆ, ಯಾರ ಕೈವಾಡವಿದೆ? ಇದರ ಹಿಂದೆ ಅಗ್ರಗಣ್ಯ ನಾಯಕರು ಸೇರಿಕೊಂಡಿದ್ದಾರಾ ಎಂಬುದು ತನಿಖೆಯ ನಂತರ ಗೊತ್ತಾಗುತ್ತದೆ, ಅಲ್ಲಿಯವರೆಗೂ ಕಾಯಬೇಕಾಗುತ್ತದೆ ಎಂದು ತಿಳಿಸಿದರು.

English summary
A Woman cries In Front Of BY Vijayendra seeking justice
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X