ಕೊಟ್ಟಿಗೆಹಾರ: KSRTC ಬಸ್ ನಿಲ್ದಾಣವನ್ನು ಬಟ್ಟೆ ತೊಳೆಯುವ ತಾಣವಾಗಿಸಿಕೊಂಡ ಮಹಿಳೆಯರು

ಚಿಕ್ಕಮಗಳೂರು, ಅಕ್ಟೋಬರ್‌, 15: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನು ಮಹಿಳೆಯರು ಬಟ್ಟೆ ಒಣಗಿಸುವ ತಾಣವನ್ನಾಗಿ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಕ್ತಿ ಯೋಜನೆಯಡಿ ಸರ್ಕಾರ ಉಚಿತ ಪ್ರಯಾಣಕ್ಕೆ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವ ಮಹಿಳೆಯರು ಕೊಟ್ಟಿಗೆಹಾರದಲ್ಲಿ ಬಸ್ ಕಾಯುತ್ತಾ ಅಲ್ಲೇ ಬಟ್ಟೆ ತೊಳೆದುಕೊಂಡು ಬಸ್ ನಿಲ್ದಾಣದಲ್ಲೇ ಒಣಗಿಸಿಕೊಂಡು ಕಾಲ ಕಳೆಯುತ್ತಿದ್ದಾರೆ.

Women passengers washing clothes at KSRTC bus stand in Kottigehara

ರಾಜ್ಯದ ಯಾವುದೇ ಭಾಗದಿಂದ ಸರ್ಕಾರ ಬಸ್‌ನಲ್ಲಿ ಬಂದರೂ ಕೊಟ್ಟಿಗೆಹಾರದಲ್ಲಿ ಇಳಿಯಲೇಬೇಕು. ಉಚಿತವಾಗಿ ಬಸ್‌ನಲ್ಲಿ ಹೊರನಾಡಿಗೆ ಹೋಗಬೇಕಂದರೆ ಕೊಟ್ಟಿಗೆಹಾರಕ್ಕೆ ಬಂದೇ ಹೋಗಬೇಕು. ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್‍ಗಳ ಸಂಖ್ಯೆ ತೀರಾ ಕಡಿಮೆ. ದಿನಕ್ಕೆ ಹೆಚ್ಚೆಂದ್ರೆ ನಾಲ್ಕೈದು ಬಸ್‌ಗಳು ಅಷ್ಟೆ ಸಂಚರಿಸೋದು.

ಆದ್ದರಿಂದ ರಾಜ್ಯದ ನಾನಾ ಭಾಗಗಳಿಂದ ಬರುವ ಮಹಿಳೆಯರು ಉಚಿತವಾಗು ಪ್ರಯಾಣಿಸುವ ಬಸ್ ಕಾಯುತ್ತಾ ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಜಮಾಯಿಸಿರುತ್ತಾರೆ. ಹೀಗೆ ಬಂದವರು, ಕೊಟ್ಟಿಗೆಹಾರದಲ್ಲಿ ನೀರಿನ ಸೌಲಭ್ಯ ಚೆನ್ನಾಗಿರುವುದರಿಂದ ಅಲ್ಲೇ ಬಟ್ಟೆ ತೊಳೆದು ಅಲ್ಲೇ ಒಣಹಾಕುತ್ತಿದ್ದಾರೆ. ಬಸ್ ನಿಲ್ಲುವ ಜಾಗ, ನೆಲದ ಮೇಲೂ ಬಟ್ಟೆ ಹಾಕುತ್ತಿದ್ದಾರೆ.

ಅಲ್ಲದೆ ಬಸ್ ನಿಲ್ದಾಣದ ಕಾಂಪೌಂಡ್ ಮೇಲೂ ಹೊಗೆದ ಬಟ್ಟೆಗಳನ್ನು ಹಾಕುತ್ತಿದ್ದಾರೆ. ಇಡೀ ದಿನ ಬಸ್ ಕಾಯುವ ಮಹಿಳೆಯರು ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನೇ ಬಚ್ಚಲು ಮನೆ ಮಾಡಿಕೊಂಡು, ಬಟ್ಟೆ ತೊಳೆದುಕೊಂಡು, ಒಣಗಿಸಿಕೊಂಡು ಬಸ್ ಬಂದ ಕೂಡಲೇ ಅವಸರವಸವಾಗಿ ಬಟ್ಟೆಯನ್ನು ಬ್ಯಾಗ್‌ಗೆ ತುಂಬಿಕೊಂಡು ಹೋಗುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+