ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಸೆಪ್ಟೆಂಬರ್ 8 : ಒಂದು ತಿಂಗಳ ಅವಧಿಯಲ್ಲಿ ಆನೆ ದಾಳಿಗೆ ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ತೋಟದ ಕೆಲಸ ಮುಗಿಸಿ ಬರುತ್ತಿದ್ದ ಕಾರ್ಮಿಕ ಅರ್ಜುನ್(45) ಎಂಬುವರ ಮೇಲೆ ಆನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಊರಬಗೆ, ಗೌಡಹಳ್ಳಿ ಭಾಗದಲ್ಲಿ ಕಾಡಾನೆಗಳು ಬೀಡುಬಟ್ಟಿದ್ದು ಸ್ಥಳಿಯರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದು ಅರಣ್ಯ ಇಲಾಖೆಯೇ ಮಾಡಿದ ಕೊಲೆ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮಲೆನಾಡಿಗರ ನಿದ್ದೆಗೆಡಿಸಿದ್ದ ಕೊನೆಗೂ ಸೆರೆಯಾದ ಹಾವೇರಿ ಆನೆ ಟಸ್ಕರ್‌ಮಲೆನಾಡಿಗರ ನಿದ್ದೆಗೆಡಿಸಿದ್ದ ಕೊನೆಗೂ ಸೆರೆಯಾದ ಹಾವೇರಿ ಆನೆ ಟಸ್ಕರ್‌

ಹಳ್ಳಿಯ ಮುಖ್ಯ ರಸ್ತೆ ಬಳಿಯೇ ಆನೆ ದಾಳಿ ಮಾಡಿರುವುದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ. ಕಳೆದ ಆಗಸ್ಟ್ 25ರಂದು ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದ ಆನಂದ್ ದೇವಾಡಿಗ ಎಂಬುವರ ಮೇಲೆ ಆನೆ ದಾಳಿ ಮಾಡಿದ್ದು ಅವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನ ಆನೆ ಕಾಡಿನಲ್ಲಿ ಸುಮಾರು ಒಂದು ಕಿ.ಮೀ. ಎಳೆದುಕೊಂಡು ಹೋಗಿದ್ದ ಪರಿಣಾಮ ದೇಹದ ಅಂಗಾಂಗಗಳು ಕಾಡಿನಲ್ಲಿ ಚದುರಿ ಹೋಗಿದ್ದವು.

Worker Killed Attacked by Elephant in Mudigere, chikmagalur District

ಗುರುವಾರವೂ ಕೂಡ ತೋಟದ ಕೆಲಸ ಮುಗಿಸಿ ಬರುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿದ್ದು ಆತ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರಿನ ಮೇಲೆ ದಾಳಿ

ಕೆಲವು ದಿನಗಳ ಹಿಂದೆ ಮೂಡಿಗೆರೆ ತಾಲೂಕಿನ ದೇವರ ಮನೆ ಬಳಿ ಮಾರುತಿ ಕಾರಿನಲ್ಲಿ ಹೋಗುತ್ತಿದ್ದವರನ್ನು ಕಾಡಾನೆಯೊಂದು ಅಟ್ಟಾಡಿಸಿರುವ ಘಟನೆ ನಡೆದಿತ್ತು. ಆನೆ ಭೀತಿಯಿಂದಾಗಿ ಪ್ರಾಣ ಭಯದಲ್ಲಿ ಕಾರು ಚಲಾಯಿದ ಪರಿಣಾಮ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದವರು ಕಾರು ಬಿಟ್ಟು ಓಡಿ ಹೋಗಿ ಕೂದಲೆಳೆಯ ಅಂತರದಲ್ಲಿ ಪ್ರಾಣ ಉಳಿಸಿಕೊಂಡಿದ್ದರು.

ಹಾವೇರಿ ಟಸ್ಕರ್ ಸೆರೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಆವಳಿ ತೀವ್ರವಾಗಿವೆ. ಬೆಳೆಗಳನ್ನು ನಾಶ ಮಾಡುವುದುರ ಜೊತೆಗೆ ಪ್ರಾಣಹಾನಿಗೂ ಕಾರಣವಾಗುತ್ತಿವೆ. ಇನ್ನು ಕಳೆದ ನಾಲ್ಕೈದು ತಿಂಗಳಿನಿಂದ ರೈತರಿಗೆ ತೊಂದರೆ ನೀಡುತ್ತಾ, ಅರಣ್ಯ ಇಲಾಖೆ ಕೈಗೆ ಸಿಗದೇ ಕಾಟ ಕೊಡುತ್ತಿದ್ದ ಹಾವೇರಿ ಟಸ್ಕರ್ ಎಂಬ ಆನೆಯನ್ನು ಆಗಸ್ಟ್ 26ರಂದು ಅರಣ್ಯ ಇಲಾಖೆ ಸೆರೆ ಹಿಡಿದಿತ್ತು.

ಕಾಡಾನೆ ಹಾವಳಿ ಮಲೆನಾಡಿನ ಪ್ರಮುಖ ಸಮಸ್ಯೆಯಾಗಿದ್ದು, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಯೋಜನೆ ರೂಪಿಸಬೇಕೆಂದು ಈ ಭಾಗದ ಬೆಳೆಗಾರರು ಸರಕಾರವನ್ನು ಆಗ್ರಹಿಸುತ್ತಿದ್ದಾರೆ. ಸರಕಾರ ಆನೆ ಕಾರಿಡಾರ್‌ಗಳಲ್ಲಿ ರೈಲ್ವೆ ಕಂಬಿಗಳ ಬ್ಯಾರಿಕೇಡ್ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಅನುದಾನ ಮೀಸಲಿಡಲಾಗಿದೆ. ಆದರೆ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಈ ಯೋಜನೆ ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿದೆ.

English summary
45 year old man was trampled to death by an elephant at Urabage village of Mudigere taluk Chikkamagaluru on Thursday. The deceased has been identified as Arjun,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X