Get Updates
Get notified of breaking news, exclusive insights, and must-see stories!

ಯಗಟಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಕುಳಿತು ಹೋಳಿಗೆ ಊಟ ಸವಿದ ವೈ. ಎಸ್. ವಿ.ದತ್ತ

ಚಿಕ್ಕಮಗಳೂರು, ಜುಲೈ, 18: ಕಡೂರು ಮಾಜಿ ಶಾಸಕ ವೈ.ಎಸ್.ವಿ ದತ್ತ ಅವರು ಸ್ವಗ್ರಾಮ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆ ಸರದಿ ಸಾಲಿನಲ್ಲಿ ಕುಳಿತು ಪ್ರಾರ್ಥನೆ ಸಲ್ಲಿಸಿ ಹೊಳಿಗೆ ಊಟ ಮಾಡಿ ಗಮನ ಸೆಳೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಸ್ವಗ್ರಾಮ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆಯೇ ಊಟ ಮಾಡಿದ್ದಾರೆ.‌ ಹಾಗೆಯೇ ಅದೇ ಶಾಲೆಯಲ್ಲಿ ಓದಿ ಬೆಳೆದ ದತ್ತ ಅವರ ಸಹೋದರಿ ವೈ.ಎಸ್.ವಿಜಯಲಕ್ಷ್ಮಿಯವರ ಸ್ಮರಣಾರ್ಥ ಮಕ್ಕಳಿಗೆ ಬಸವಣ್ಣ, ಡಿವಿಜಿ ಹಾಗೂ ಅಂಬೇಡ್ಕರ್ ಅವರ ಪುಸ್ತಕಗಳ ಜೊತೆ ಓದಿನ ಸಾಮಾಗ್ರಿಗಳನ್ನು ನೀಡಿದ್ದಾರೆ.

Y.S.V.Datta had Holige meal with students in Yagati villages Government School

ಅಲ್ಲದೆ ಇದೆ ಮಾತಾನಾಡಿದ ಅವರು, ಮನುಷ್ಯ ಎಷ್ಟೇ ಅತ್ಯುನ್ನತ ಸ್ಥಾನಕ್ಕೆ ಹೋದರೂ ತಮಗೆ ಪ್ರಾಥಮಿಕ ಶಿಕ್ಷಣ ನೀಡಿದ ಶಾಲೆಯೊಡನೆ ಸದಾ ಸಂಪರ್ಕವಿಟ್ಟುಕೊಂಡು ಆ ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದರು. ಹಾಗೆಯೇ 153 ವರ್ಷಗಳ ಹಿಂದಿನ ಈ ಶಾಲೆ ರಾಜ್ಯವ್ಯಾಪಿ ದೊಡ್ಡ ಕೊಡುಗೆ ನೀಡಿದೆ.‌ ಇಲ್ಲಿ ವ್ಯಾಸಂಗ ಪಡೆದ ಅನೇಕರು ಅತ್ಯುನ್ನತ ಹುದ್ದೆಗೇರಿದ್ದಾರೆ. ಅವರಲ್ಲಿ ವಿಜಯಲಕ್ಷ್ಮಿ ಕೂಡ ಒಬ್ಬರು. ಅವರು ಸಾಂಸ್ಕೃತಿಕ ಹಾಗೂ ಸಾಹಿತಿಕವಾಗಿ ಬಹು ದೊಡ್ಡ ಜ್ಞಾನ ಹೊಂದಿದ್ದರು.‌

ರಾಮಕೃಷ್ಣ ಹೆಗ್ಗಡೆಯವರು ಸಿಎಂ ಆಗಿದ್ದಾಗ ರೂಪಿಸಿದ ಹಲವು ಯೋಜನೆಗಳಿಗೆ ವಿಜಯಲಕ್ಷ್ಮಿ ಅವರ ಹೆಸರು ಸೂಚಿಸುತ್ತಿದ್ದರು. ಅಂತಹ ದೊಡ್ಡ ಜ್ಞಾನ ಸಂಪಾದಿಸಿದ್ದ ವಿಜಯಲಕ್ಷ್ಮಿ ಶಿಕ್ಷಣ ಪ್ರೇಮಿಯಾಗಿದ್ದರು ಎಂದರು. ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬುದು ಅವರ‌ ಆಶಯ. 60 ವರ್ಷಗಳ ಹಿಂದೆ ನಾನೂ ಕೂಡ ಈ ಶಾಲೆಯ ವಿದ್ಯಾರ್ಥಿಯಾಗಿದ್ದ ನೆನಪು ಸದಾ ಜೀವಂತವಾಗಿರುತ್ತದೆ ಎಂದಿದ್ದಾರೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಲು ವೆಬ್‌ಸೈಟ್ ಆರಂಭ

ಇನ್ನು ಮತ್ತೊಂದೆಡೆ ಚಿಕ್ಕಬಳ್ಳಾಪುರದಾದ್ಯಂತ ಮನೆ ಮಾತಾಗಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಕಾರ್ಯಕ್ರಮ "ನಮಸ್ತೆ ಚಿಕ್ಕಬಳ್ಳಾಪುರ" ಎಂಬ ಕಾರ್ಯಕ್ರಮದ ಮೂಲಕ ಕ್ಷೇತ್ರದ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುವ ವಿನೂತನ ಕಾರ್ಯಕ್ರಮ ಮಾಡಿ ಮಾದರಿಯಾಗಿದ್ದ ಶಾಸಕ ಪ್ರದೀಪ್ ಈಶ್ವರ್ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ನಾಡಿನ ಜನತೆ ಕುಳಿತಲ್ಲೆ ತಮ್ಮ ಕಷ್ಟಗಳನ್ನು ತಮ್ಮ ಶಾಸಕರೊಂದಿಗೆ ಹಂಚಿಕೊಳ್ಳುವ ಅವಕಾಶ ಕಲ್ಪಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡು ರಾಜ್ಯದ ಮತದಾರರ ಚಿತ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಕಡೆ ನೆಟ್ಟುವಂತೆ ಮಾಡಿದ್ದ ಪ್ರದೀಪ್ ಈಶ್ವರ್ ಇಂದು ಹೊಸ ಹಾದಿಯಲ್ಲಿ ಮುನ್ನಡೆದಿದ್ದು ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ʻwww.pradeepeshwarmla.comʼ ಎಂಬ ಹೊಸ ವೆಬ್‌ಸೈಟ್ ಆರಂಭಿಸಿದ್ದರು.

ಕ್ಷೇತ್ರದ ಜನ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ದೂರು ನೀಡಲು ನೇರವಾಗಿ ಶಾಸಕರ ಬಳಿ ತೆರಳಲು ಕೆಲವರಿಗೆ ಸಾಧ್ಯವಾಗುವುದಿಲ್ಲ, ಜೊತೆಗೆ ಸಮಯ ಮತ್ತು ಹಣ ವ್ಯಯ ಮಾಡಿಕೊಂಡು ಶಾಸಕರ ಮನೆಯ ಬಳಿ ಬರುವುದು ಬೇಡ, ಜನರು ತಮ್ಮ ಸಮಸ್ಯೆ ತಿಳಿಸಲಿಕ್ಕೂ ಸಹ ಹಣ ಖರ್ಚು ಮಾಡೋದು ಬೇಡ ಎಂಬ ಸದುದ್ದೇಶದಿಂದ ಈ ವೆಬ್ ಸೈಟ್ ಆರಂಭಿಸಿಲಾಗಿದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದ್ದರು.

ಸಾರ್ವಜನಿಕರು ಅದರಲ್ಲೂ ಕ್ಷೇತ್ರದ ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ನೇರವಾಗಿ ಭೇಟಿ ಮಾಡಲೂ ಸಾಧ್ಯವಾಗುವುದಿಲ್ಲ. ಈ ದೃಷ್ಟಿಯಿಂದ ತಮ್ಮ ಮೊಬೈಲ್ ಮೂಲಕವೇ ತಮ್ಮ ಸಮಸ್ಯೆಗಳಿಗೆ ದೂರು ಹೇಳಿಕೊಳ್ಳಲು ವೆಬ್‌ಸೈಟ್‌ನಲ್ಲಿ ಬಲಗಡೆ ದೂರು/ಸಲಹೆಗಳು ಎಂಬ ವಿಭಾಗಗಳಿದ್ದು, ಅದರ ಮೇಲೆ ಕ್ಲಿಕ್‌ ಮಾಡಿದರೆ, ಕಂಪ್ಲೇಟ್‌ ಬಾಕ್ಸ್‌ ತೆರೆಯುತ್ತದೆ. ಜನ ಅಲ್ಲಿ ತಮ್ಮ ಅಭಿಪ್ರಾಯ/ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ದೂರು ನೀಡುವ ಜನರ ಮೊಬೈಲ್ ನಂಬರ್‌ಗೆ ಕರೆ ಮಾಡಿ ಸ್ಪಂದಿಸಲು ಸಿಬ್ಬಂದಿಯನ್ನ ನೇಮಕ ಮಾಡಿ ಕಚೇರಿ ಸಹ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಸಿಬ್ಬಂದಿ ಜನರಿಗೆ ಸ್ಪಂದಿಸಲಿದ್ದಾರೆ ಎಂದು ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+