ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಮಲತಾ ನಿರ್ಧಾರ ನೋಡಿ ನಮ್ಮ ನಿಲುವು ಪ್ರಕಟಿಸುತ್ತೇವೆ: ಯಡಿಯೂರಪ್ಪ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಬಿ ಎಸ್ ಯಡಿಯೂರಪ್ಪ

ಚಿಕ್ಕಮಗಳೂರು, ಮಾರ್ಚ್ 14:ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ‌ಕಳೆದ ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಶೃಂಗೇರಿಗೆ ಭೇಟಿ ನೀಡಿದ ಬೆನ್ನಲ್ಲೇ ಇಂದು ಗುರುವಾರ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶೃಂಗೇರಿಗೆ ಭೇಟಿ ನೀಡಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ತಮ್ಮ ಮೊಮ್ಮಕ್ಕಳ ಶ್ರೇಯೋಭಿವೃದ್ದಿಗೆ ಮೊನ್ನೆಯಷ್ಟೇ, ದೇವೇಗೌಡರ ಕುಟುಂಬ ತಮ್ಮ ಕುಟುಂಬದ ಆರಾಧ್ಯ ದೈವ, ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಹೋಮ ಹವನ ನಡೆಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಲಾಭ: 4ಕ್ಷೇತ್ರದಲ್ಲಿ ಬಿಜೆಪಿಗೆ ಸಿಕ್ತು ಬಂಪರ್ ಗಿಫ್ಟ್?ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಲಾಭ: 4ಕ್ಷೇತ್ರದಲ್ಲಿ ಬಿಜೆಪಿಗೆ ಸಿಕ್ತು ಬಂಪರ್ ಗಿಫ್ಟ್?

ಈಗ ಟಿಕೆಟ್ ಹಂಚಿಕೆಗೂ ಮೊದಲೇ ಯಡಿಯೂರಪ್ಪ ಅವರು ಶೃಂಗೇರಿ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಆರ್ಶಿವಾದ ಪಡೆದಿದ್ದಾರೆ. ನಂತರ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ದೇಶದಲ್ಲಿ ಈ ಭಾರೀ ಮೋದಿ ಮೋದಿ ಅಲೆ ಕಳೆದ ಬಾರಿಗಿಂತ ಹೆಚ್ಚಿದ್ದು, ಈ ಬಾರಿ ಚುನಾವಣೆಯಲ್ಲಿ ಶೇ.10 ರಿಂದ 12 ಪರ್ಸೆಂಟ್ ಹೆಚ್ಚು ಮತಗಳನ್ನು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾ.18 ರಂದು ಅಭ್ಯರ್ಥಿಗಳ ಘೋಷಣೆ

ಮಾ.18 ರಂದು ಅಭ್ಯರ್ಥಿಗಳ ಘೋಷಣೆ

ಇದೇ ತಿಂಗಳು 17 ರಂದು ಕೋರ್ ಕಮಿಟಿ ಸಭೆ ನಡೆಸಿದ ಬಳಿಕ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಈ ಬಾರಿಯ ಚುನಾವಣೆಯಲ್ಲಿ ಸುಮಾರು 22 ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

ಇದು ಸಿಎಂ ಗೆ ಶೋಭೆ ತರಲ್ಲ

ಇದು ಸಿಎಂ ಗೆ ಶೋಭೆ ತರಲ್ಲ

ಮಂಡ್ಯ ಕ್ಷೇತ್ರದ ಬಗ್ಗೆ ಇನ್ನು ಯಾವುದೇ ನಿರ್ಧಾರ ಮಾಡಿಲ್ಲ.ಸುಮಲತಾ ನಿರ್ಧಾರ ನೋಡಿ ನಮ್ಮ ನಿರ್ಧಾರ ಪ್ರಕಟ ಮಾಡಲಾಗುವುದು ಎಂದ ಯಡಿಯೂರಪ್ಪ ಅವರು, ಕುಮಾರಸ್ವಾಮಿಗೆ ಅಂಬರೀಶ್ ಅವರ ಮೇಲೆ ಮೊದಲು ಅಭಿಮಾನವಿತ್ತು. ಆದ್ರೆ ಅವರ ಮರಣದ ನಂತರ ಈಗ ಅಂಬರೀಶ್ ಕೊಡುಗೆ ಏನು ಅಂದಿದ್ದಾರೆ? ಇದು ಸಿಎಂ ಗೆ ಶೋಭೆ ತರುವಂಥದ್ದಲ್ಲ ಎಂದರು.

ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ದಿನಾಂಕ ಘೋಷಣೆ, ಇವೆ ಕೆಲವು ಬದಲಾವಣೆಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ದಿನಾಂಕ ಘೋಷಣೆ, ಇವೆ ಕೆಲವು ಬದಲಾವಣೆ

ಕಾಂಗ್ರೆಸ್ ಗೆ ಅಭ್ಯರ್ಥಿಯೇ ಇಲ್ಲ

ಕಾಂಗ್ರೆಸ್ ಗೆ ಅಭ್ಯರ್ಥಿಯೇ ಇಲ್ಲ

ಇದೇ ವೇಳೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಗೆ ಪುನರ್ ಜನ್ಮ ನೀಡಿದ ಕ್ಷೇತ್ರ. ಆದ್ರೆ ಈಗ ಇಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿಯೇ ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದರು.

ಟೆಂಪಲ್ ರನ್ ಜೋರು

ಟೆಂಪಲ್ ರನ್ ಜೋರು

ಒಟ್ಟಾರೆ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ಅದ್ರಲ್ಲೂ ರಾಜ್ಯದ ಪ್ರಮುಖ ನಾಯಕರು ಶಕ್ತಿ ದೇವತೆ ಶಾರದಾಂಬೆಯ ಮೊರೆ ಹೋಗುತ್ತಿದ್ದು, ಶಾರದೆ ಯಾರ ಕೈ ಹಿಡಿಯುತ್ತಾಳೆ ಎಂಬುದನ್ನು ಕಾದು ನೋಡಬೇಕಿದೆ.

'ಕೈ' ತಪ್ಪಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ:ಬಿಜೆಪಿ ಪಾಳಯದಲ್ಲಿ ಹರ್ಷ'ಕೈ' ತಪ್ಪಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ:ಬಿಜೆಪಿ ಪಾಳಯದಲ್ಲಿ ಹರ್ಷ

English summary
Lok Sabha Election 2019:Former CM Yeddyurappa talked about Mandya constituency. He said We will publish our stand after the decision of Sumalatha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X