Yediyurappa: ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ಕಿತ್ತಾಟ, ಬಿಎಸ್‌ವೈ ರೋಡ್ ಶೋ ರದ್ದು
ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಟ್ಟು ಹೊಸಮುಖಗಳಿಗೆ ಟಿಕಟ್ ಕೊಡಿ ಎಂದು ನೂರಾರು ಕಾರ್ಯಕರ್ತರು ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು, ಮಾರ್ಚ್, 16: ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಟ್ಟು ಹೊಸಮುಖಗಳಿಗೆ ಟಿಕಟ್ ಕೊಡಿ ಎಂದು ನೂರಾರು ಕಾರ್ಯಕರ್ತರು ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ರೋಡ್ ಶೋ ಅರ್ಧಕ್ಕೆ ರದ್ದುಗೊಳಿಸಿದ್ದಾರೆ.
ಕೋಪಗೊಂಡ ಬಿ.ಎಸ್. ಯಡಿಯೂರಪ್ಪ
ಯಡಿಯೂರಪ್ಪರನ್ನು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೋಪಗೊಂಡ ಬಿ.ಎಸ್. ಯಡಿಯೂರಪ್ಪನವರು ರೋಡ್ ಶೋ ರದ್ದು ಮಾಡಿ ಹೆಲಿಪ್ಯಾಡ್ ಕಡೆಗೆ ಹೋಗಿದ್ದಾರೆ. ಸಿ.ಟಿ. ರವಿ ಮಾತನಾಡಿ, ಪಕ್ಷದ ಮರ್ಯಾದೆ ಕಳೆಯುತ್ತಿದ್ದೀರಾ? ನೀವು ಮೊದಲೇ ಮಾತನಾಡಿಕೊಳ್ಳಬೇಕಿತ್ತು ಎಂದು ಹೇಳುವ ಮೂಲಕ ರಾಷ್ಟ್ರಿಯ ಹೆದ್ದಾರಿಯಲ್ಲಿ ತಮ್ಮ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಹೊಸ ಮುಖಕ್ಕೆ ಟಿಕೆಟ್ ಕೊಡಿ
ಕಾರ್ಯಕರ್ತರು ನಮಗೆ ಕುಮಾರಸ್ವಾಮಿ ಬೇಡವೇ ಬೇಡ ಎಂದು ಹೇಳುವ ಮೂಲಕ ಬಿ.ಎಸ್.ವೈ. ಬರುವ ಮಾರ್ಗದಲ್ಲಿ ರಸ್ತೆ ಅಡ್ಡಗಟ್ಟಿ ಕೂಗಾಟ ನಡೆಸಿದ್ದಾರೆ. ಹೆದ್ದಾರಿಯಲ್ಲಿ 1000ಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸಿದ್ದು, ಹೊಸ ಮುಖಕ್ಕೆ ಟಿಕೆಟ್ ಕೊಡಿ ಎಂದು ಪಟ್ಟುಹಿಡಿದಿದ್ದರು. ಈ ವೇಳೆ ಎಂ.ಪಿ.ಕುಮಾರಸ್ವಾಮಿಯವರನ್ನು ಪೊಲೀಸರು ಬೇರೆಡೆಗೆ ಕರೆದೊಯ್ದರು.

ಲಿಂಗಾಯತರ ಮತ ಬೇಡ ಎನ್ನುವ ಹೇಳಿಕೆ ಸಾಮಾಜಿಕ ಜಾಲತಾಣಲ್ಲಿ ವೈರಲ್ ಆಗಿತ್ತು. ಇದನ್ನು ಸಿ.ಟಿ.ರವಿ ಹೇಳಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತತ್ತು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್.ವೈ. ಆ ರೀತಿ ಯಾರೂ ಹೇಳಿಕೆ ಕೊಡಬಾರದು, ಅದು ತಪ್ಪು. ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಹೇಳಿದರು.












Click it and Unblock the Notifications