ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು; ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ, 25: ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ ನಡೆದಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಬಯಲಾಗಿದೆ

ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎಂಬಂತೆ ಆಗಿದೆ. ನಗರ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

 ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ನಿವಾಸಿಗಳು ಪತ್ತೆ ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ನಿವಾಸಿಗಳು ಪತ್ತೆ

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಬೆಂಬಲಿಗರು ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ನಿತೀಶ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ತೆಗೆದುಹಾಕಿದ್ದು ಘರ್ಷಣೆಗೆ ಮುಖ್ಯ ಕಾರಣ ಎಂದು ಅಂದಾಜಿಸಲಾಗಿದೆ.

Youth Congress workers fight at Chikkamagaluru

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಎದುರಿನಲ್ಲೇ ಗಲಾಟೆ ನಡೆಯಿತು. ಯುವಕರ ವರ್ತನೆಯಿಂದ ಬೇಸತ್ತ ಮಂಜೇಗೌಡ ರಾಜೀನಾಮೆ ನೀಡಲು ಮುಂದಾದರು. ಜಿಲ್ಲೆಯ ಯುವ ಕಾಂಗ್ರೆಸ್ಸಿನಲ್ಲಿ ಜಾತಿ ರಾಜಕಾರಣ ಹೆಚ್ಚಿದೆ ಎಂಬ ಆರೋಪವಿದೆ. ಈ ಮಧ್ಯೆ ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂತೋಷ್ 17 ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಿದರು.

ಇದರಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಸಮಯವನ್ನು ಕಾಯುತ್ತಿದ್ದರು. ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ನಡೆ ಖಂಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ನಿತೀಶ್‌ರನ್ನು ಕಾರ್ಯದರ್ಶಿ ಸ್ಥಾನದಿಂದ ತೆಗೆದು ಹಾಕಿದ್ದು, ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯ ಮುಖಂಡರು ಹೇಳಿದ್ದಾರೆ.

ಇದು ಮೊದಲಲ್ಲ; ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಈ ರೀತಿಯ ಗಲಾಟೆ ಇದೇ ಮೊದಲೇನಲ್ಲ. ಕಳೆದ ಒಂದು ವರ್ಷದಲ್ಲಿ ಸುಮಾರು 3 ಗಲಾಟೆಗಳಾಗಿವೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯಷ್ಟೇ ಮನವಿ ನೀಡುವ ವೇಳೆ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದರು.

Youth Congress workers fight at Chikkamagaluru

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಾಳೆಹೊನ್ನೂರಿಗೆ ಬಂದಾಗ ಕಾರ್ಯಕರ್ತರು ಯಾರು ಇಲ್ಲ. ಎಲ್ಲರೂ ನಾಯಕರೇ ಎಂದು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಕಾಫಿನಾಡಿನ ಜಿಲ್ಲಾ ಕಾಂಗ್ರೆಸ್‌ನದ್ದು ಒಂದು ಕಥೆಯಾದರೆ ಯುವ ಕಾಂಗ್ರೆಸ್‌ನದ್ದು ಮತ್ತೊಂದು ಕತೆಯಾಗಿದೆ.

ರಾಜ್ಯ ರಾಜಧಾನಿಯಲ್ಲಿ ಕುರ್ಚಿಗಾಗಿ ದೊಡ್ಡವರು ಕಿತ್ತಾಡುತ್ತಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಸಣ್ಣ-ಸಣ್ಣ ವಿಚಾರಕ್ಕೆ ಕಾರ್ಯಕರ್ತರು ಕಚ್ಚಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದೆ, ಆದರೆ ಕಾಂಗ್ರೆಸ್‌ನಲ್ಲಿ ಮಾತ್ರ ಒಳಜಗಳಗಳು ತಪ್ಪುತ್ತಿಲ್ಲ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡವರ ಒಳ ಜಗಳ ಒಂದು ಕಡೆಯಾದರೆ, ಮತ್ತೊಂದೆಡೆ ಜಿಲ್ಲಾ ಮಟ್ಟದಲ್ಲಿ ಕಿರಿಯರ ನಡುವೆ ಸಂಘರ್ಷಗಳು ಆಗುತ್ತಲೇ ಇದ್ದು, ಎಲ್ಲೋ ಒಂದು ಕಡೆ ಪಕ್ಷಕ್ಕೆ ಇದು ಮುಳುವಾಗಬಹುದೇನೋ ಅನ್ನುವ ಮಾತುಗಳು ಕೇಳಿಬರುತ್ತಿವೆ.

ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಆಗಿದ್ದು, ಪಕ್ಷಕ್ಕೆ ಮುಜುಗರವಾಗುವಂತೆ ಮಾಡಿದೆ ಎಂದು ಸ್ವಪಕ್ಷದವರೇ ಅಸಮಾಧಾನ ಹೊರಹಾಕಿದ್ದಾರೆ. ರಾಜಕೀಯ ಅಂದಮೇಲೆ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ವಾದಗಳು ಸಾಮಾನ್ಯವಾಗಿರುತ್ತವೆ. ಆದರೆ ತಮ್ಮ ಪಕ್ಷಗಳಲ್ಲಿಯೇ ಒಳ ಜಗಳ ಆಗುತ್ತಿರುವುದು ಹಿರಿಯ ನಾಯಕರನ್ನು ಮುಜುಗರಕ್ಕೆ ತಳ್ಳುತ್ತಿದೆ.

Recommended Video

ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರಮಾಣವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಅಗೌರವ | OneIndia Kannada

English summary
Youth Congress workers fight at district party office of Chikmagalur. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X