ಸ್ನೇಹಿತರ ಜೊತೆ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕ
ಚಿಕ್ಕಮಗಳೂರು: ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೃತನನ್ನು 22 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದ ಬಿ ಹೊಸಹಳ್ಳಿಯ ಕೆರೆಯಲ್ಲಿ ಅವಿನಾಶ್ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಅವಿನಾಶ್ ಮೂಲತಃ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದವರು.

ಅವಿನಾಶ್ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಮೃತದೇಹಕ್ಕಾಗಿ ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ.












Click it and Unblock the Notifications