ಚಿಕ್ಕಮಗಳೂರು; ಭದ್ರಾ ನಾಲೆಯಲ್ಲಿ ಮುಳುಗಿ ಯುವಕ ಸಾವು

ಚಿಕ್ಕಮಗಳೂರು, ನವೆಂಬರ್ 13: ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಕೊಚ್ಚಿ ಹೋಗಿ ಸ್ನೇಹಿತರ ಕಣ್ಣೆದುರೇ ಸಾವಿಗೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ ಶುಕ್ರವಾರ ನಡೆದಿದೆ.

ಮೃತನನ್ನು 22 ವರ್ಷದ ವಿಶ್ವಾಸ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ.

Chikmagaluru: Youth Drowned in Upper Bhadra Canal in Doranalu Tarikere

ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನಿಗೆ ಹಗ್ಗ ಎಸೆದು ಸಹಾಯ ಮಾಡಲು ಪ್ರಯತ್ನಿಸಿದರೂ ಫಲ ನೀಡಲಿಲ್ಲ. ನಾಲ್ವರು ಯುವಕರು ಆತನನ್ನು ಉಳಿಸಲು ಹರಸಾಹಸ ಮಾಡಿದ್ದು, ರಕ್ಷಣೆ ಸಾಧ್ಯವಾಗದೇ ವಿಶ್ವಾಸ್ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾರೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತರೀಕೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Recommended Video

      ಪತ್ರಿಕಾ ರಂಗದ ದೊಡ್ಡ ಕೊಂಡಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+