ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ಬಿಎಸ್ಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮಕ್ಕಳದ್ದೇ ದರ್ಬಾರ್!

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಏಪ್ರಿಲ್ 10:ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಂಜುಂಡಸ್ವಾಮಿ ಅವರ ಪರ ನಡೆದ ಚುನಾವಣಾ ಪ್ರಚಾರದಲ್ಲಿ ಮಕ್ಕಳೇ ಕಂಡು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಹಾಗೆ ನೋಡಿದರೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಆರೋಪ- ಪ್ರತ್ಯಾರೋಪಗಳು ಮೇಲಿಂದ ಮೇಲೆ ನಡೆಯುತ್ತಿದ್ದು, ಹೈವೊಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಇವರ ನಡುವೆ ಇತರೆ ಅಭ್ಯರ್ಥಿಗಳು ಮಂಕಾಗಿದ್ದಾರೆ.

ಮಂಡ್ಯ, ಮೈಸೂರು, ಹಾಸನ, ತುಮಕೂರು: ಈಗಿನ ರಾಜಕೀಯ ಚಿತ್ರಣ ಹೇಗಿದೆ?ಮಂಡ್ಯ, ಮೈಸೂರು, ಹಾಸನ, ತುಮಕೂರು: ಈಗಿನ ರಾಜಕೀಯ ಚಿತ್ರಣ ಹೇಗಿದೆ?

ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮಂಡ್ಯ ಚುನಾವಣಾ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಕಣದಲ್ಲಿ ಇಲ್ಲದಿರುವುದು ಮತ್ತು ಕಾಂಗ್ರೆಸ್ ಪಕ್ಷ ಪ್ರಾದೇಶಿಕ ಪಕ್ಷಕ್ಕೆ ಶರಣಾಗಿರುವುದು ಕೂಡ ಅಚ್ಚರಿಯ ಸಂಗತಿಯಾಗಿದೆ.

Childrens campaigning for the BSP candidate Nanjundaswamy in Mandya

ಇಲ್ಲಿ ಪಕ್ಷೇತರ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾದ ಬಿಎಸ್ಪಿಯಿಂದ ನಂಜುಂಡಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು, ಇವರ ಪರ ಈಗಾಗಲೇ ಮಾಜಿ ಸಚಿವ ಎನ್.ಮಹೇಶ್ ಅವರು ಪ್ರಚಾರ ನಡೆಸಿದ್ದಾರೆ.

ಆದರೆ ಎಲ್ಲ ಕ್ಷೇತ್ರಗಳಲ್ಲಿಯೂ ಬಿಎಸ್ಪಿ ಅಭ್ಯರ್ಥಿ ಪರ ಮಹೇಶ್ ಅವರೇ ಪ್ರಚಾರ ನಡೆಸಬೇಕಾದ ಅನಿವಾರ್ಯತೆ ಎದುರಾಗಿರುವ ಕಾರಣ ಮಂಡ್ಯದಲ್ಲಿ ಬಿಎಸ್ಪಿ ಪರ ಚುನಾವಣಾ ಪ್ರಚಾರ ನಡೆಸಲು ನಾಯಕರು ಮತ್ತು ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿದೆ.

ಹಾಸನದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಶಾಕ್ ಕೊಟ್ಟ ಬಿಜೆಪಿಹಾಸನದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಶಾಕ್ ಕೊಟ್ಟ ಬಿಜೆಪಿ

ಮೈಸೂರಿನ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕೆಲವು ಪ್ರದೇಶಗಳು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸೇರ್ಪಡೆಗೊಂಡಿರುವ ಕಾರಣ ಕೆ.ಆರ್.ನಗರ ತಾಲೂಕು ಭೇರ್ಯದ ಗಾಂಧಿವೃತ್ತದಲ್ಲಿ ಬಿಎಸ್ಪಿ ಅಭ್ಯರ್ಥಿ ನಂಜುಂಡಸ್ವಾಮಿ ಪರವಾಗಿ ಮತಯಾಚಿಸಿದಾಗ ಕಾರ್ಯಕರ್ತರ ಕೊರತೆ ಎದ್ದು ಕಂಡಿತಲ್ಲದೆ, ಇಲ್ಲಿ ಮಕ್ಕಳೇ ಇದ್ದದ್ದು ಅಚ್ಚರಿಗೆ ಕಾರಣವಾಗಿದೆ.

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಇದು ಗೊತ್ತಿದ್ದರೂ ಮಕ್ಕಳನ್ನು ನಿಲ್ಲಿಸಿ ಪ್ರಚಾರ ನಡೆಸುವುದು ಎಷ್ಟು ಸರಿ? ಎಂಬುದಾಗಿ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ ಇನ್ನು ಮುಂದೆಯಾದರೂ ಈ ರೀತಿ ಮಾಡದಿರಲಿ.

English summary
Lok Sabha Elections 2019:Childrens campaigning for the BSP candidate Nanjundaswamy in Mandya. Childrens have been used to promote them as there is a lack of workers in the BSP party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X