Chitradurga Elections: ಕೋಟೆನಾಡು ಚಿತ್ರದುರ್ಗದಲ್ಲಿ ಯಾರಿಗೆ ಅಧಿಕಾರ?
ಚಿತ್ರದುರ್ಗ, ಮಾರ್ಚ್ 24: ರಾಜ್ಯದ ಮಧ್ಯ ಭಾಗದಲ್ಲಿರುವ ವೇದಾವತಿ ನದಿಯ ಕಣಿವೆಯಲ್ಲಿ ನೆಲೆಗೊಂಡಿರುವ ಚಿತ್ರದುರ್ಗ ಜಿಲ್ಲೆ ಐತಿಹಾಸಿಕ ಪ್ರಸಿದ್ಧ ನಗರವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಿಂದ ಸುಮಾರು 200 ಕಿಮೀ ದೂರದಲ್ಲಿರುವ ಚಿತ್ರದುರ್ಗವು ಐತಿಹಾಸಿಕ ಮಹತ್ವವನ್ನು ಹೊಂದಿರುವ ಸ್ಥಳವಾಗಿದೆ. ಚಿತ್ರದುರ್ಗ ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವಾಗಿರುವ ಜೊತೆಗೆ ರಾಜಕೀಯವಾಗಿಯೂ ಪ್ರಮುಖ ಜಿಲ್ಲೆಯಾಗಿದೆ.
15 ನೇ ಶತಮಾನದ ಕಲ್ಲಿನ ಕೋಟೆಗೆ ಹೆಸರುವಾಸಿಯಾಗಿರುವ ಚಿತ್ರದುರ್ಗವು ವಿಧಾನಸಭಾ ಚುನಾವಣೆಗೆ ಎದುರು ನೋಡುತ್ತಿದೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರ ಪಡೆದಿದ್ದು, ಈ ಬಾರಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಕ್ಷೇತ್ರ ಜಾರುವಂತಿದೆ. ಮಹಿಳಾ ಮತದಾರರೇ ನಿರ್ಣಾಯಕವಾಗಿರುವ ಜಿಲ್ಲೆಯಲ್ಲಿ ಮಹಿಳೆಯರನ್ನು ಸೆಳೆಯಲು ಎಲ್ಲಾ ಪಕ್ಷಗಳು ರಣತಂತ್ರ ಹೂಡುತ್ತಿವೆ.

*ಚಿತ್ರದುರ್ಗದ ಇತಿಹಾಸ*
ಪುರಾಣದ ಪ್ರಕಾರ ಶ್ರೀಕೃಷ್ಣ ಜಾಂಬವತಿಯ ಪುತ್ರನಾದ ಚಿತ್ರಕೇತು ಆಳ್ವಿಕೆ ಮಾಡಿದ ಪ್ರದೇಶ ಚಿತ್ರದುರ್ಗ. ಚಿತ್ರದುರ್ಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಲ್ಲುಬೆಟ್ಟಗಳಿಂದ ಹಾಗೂ ಹುಲ್ಲುಗಾವಲುಗಳಿಂದ ಕೂಡಿದ ದುರ್ಗಮ ಪ್ರದೇಶವಾಗಿತ್ತು. ಅಂತಹ ದುರ್ಗಮ ಪ್ರದೇಶವನ್ನು ಚಿತ್ರಕೇತು ಆಳ್ವಿಕೆ ಮಾಡಿದ ಕಾರಣದಿಂದ ಚಿತ್ರದುರ್ಗ ಎಂದು ಹೆಸರು ಬಂದಿದೆ ಎನ್ನಲಾಗಿದೆ. ಬ್ರಿಟೀಷರ ಕಾಲದಲ್ಲಿ ಚಿತ್ತಲ್‍ದ್ರಗ್ ಅಧಿಕೃತ ಹೆಸರಾಗಿತ್ತು. ಇದ್ದರಿಂದ ಚಿತ್ರದುರ್ಗ ಎಂದು ಕರೆಯುತ್ತಾರೆ.
ಚಿತ್ರದುರ್ಗದ ಕಲ್ಲಿನ ಕೋಟೆ ಪ್ರಸಿದ್ಧ ಪ್ರವಾಸಿ ಸ್ಥಳವಾಗಿದೆ. ರಾಷ್ಟ್ರಕೂಟರು, ಚಾಲುಕ್ಯರು, ಹೊಯ್ಸಳರು ಮತ್ತು ಚಿತ್ರದುರ್ಗದ ನಾಯಕರು ಸೇರಿದ ಹಲವು ರಾಜರು ಚಿತ್ರದುರ್ಗ ಕೋಟೆಯನ್ನು ಸುಮಾರು 10 ರಿಂದ 18ನೇ ಶತಮಾನದವರೆಗೆ ಆಳಿದ್ದಾರೆ. ಚಿತ್ರದುರ್ಗದಲ್ಲಿ ನಾಯಕರ ಆಳ್ವಿಕೆಯಿತ್ತು ಎನ್ನಲಾಗುತ್ತದೆ. ತಿಮ್ಮ ನಾಯಕರ ಮಗ ಮದಕರಿ ನಾಯಕ ಚಿತ್ರದುರ್ಗದ ಕೊನೆಯ ದೊರೆ ಎನ್ನಲಾಗಿದೆ. ಕನ್ನಡ ಸಿನಿಮಾಗಳಲ್ಲಿ ಚಿತ್ರದುರ್ಗದ ಕೋಟೆ ತನ್ನದೆ ಆದ ಸ್ಥಾನ ಪಡೆದುಕೊಂಡಿದೆ.

*ಚಿತ್ರದುರ್ಗದ ರಾಜಕೀಯ*
ಚಿತ್ರದುರ್ಗ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 1957 ರಲ್ಲಿ ಕಾಂಗ್ರೆಸ್‌ನ ಜಿ. ಶಿವಪ್ಪ ಗೆಲುವು ದಾಖಲಿಸುವ ಮೂಲಕ ಕಾಂಗ್ರೆಸ್‌ಗೆ ಅಡಿಪಾಹ ಹಾಕಿದ್ದರು. 1962 ಮತ್ತು 1967 ರಲ್ಲಿ ಎಚ್.ಸಿ ಬೋರಯ್ಯ, 1972ರಲ್ಲಿ ಸಿ ಆರ್ ಮೊಹಮ್ಮದ್ ಸೈಫುದ್ದೀನ್, 1978ರಲ್ಲಿ ವಿ. ಮಸಿಯಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗುತ್ತಾ ಬಂದಿದ್ದರು. 1983 ರಲ್ಲಿ ಜನತಾ ಪಕ್ಷದ ಬಿ.ಎಲ್. ಗೌಡ ಗೆಲುವು ದಾಖಲಿಸಿದ್ದರು. ಇದಾದ ಮೇಲೆ 1985 ಮತ್ತು 1989 ರಲ್ಲಿ ಜನತಾ ಪಕ್ಷದ ಎಚ್.ಏಕಾಂತಯ್ಯ ಎರಡು ಅವಧಿಗೆ ಆಯ್ಕೆಯಾದರು.
ಮತ್ತೆ 1994 ರಲ್ಲಿ ಕಾಂಗ್ರೆಸ್‌ನಿಂದ ಜಿ.ಎಚ್. ತಿಪ್ಪಾರೆಡ್ಡಿ ಗೆಲ್ಲುವ ಮೂಲಕ ಕಾಂಗ್ರೆಸ್ ಗೆಲುವಿನ ಓಟ ಮುಂದುವರೆದಿತ್ತು. 1999, 2004ರಲ್ಲಿಯೂ ಸತತವಾಗಿ ಮೂರು ಬಾರಿಗೆ ಜಿ.ಎಚ್. ತಿಪ್ಪಾರೆಡ್ಡಿ ಹ್ಯಾಟ್ರಿಕ್ ಗೆಲುವು ದಾಖಲಿಸಿದರು 2008 ಜೆಡಿಎಸ್ ತನ್ನ ಖಾತೆ ತೆರೆಯಿತು. ಬಸವರಾಜಣ್ಣ (ಬಸಣ್ಣ) ಶಾಸಕರಾದರು. ಅಷ್ಟಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಜಿ.ಎಚ್. ತಿಪ್ಪಾರೆಡ್ಡಿ ಮತ್ತೆ 2013 ರಲ್ಲಿ ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ.
2018 ರಲ್ಲಿ ಭಾರತೀಯ ಜನತಾ ಪಾರ್ಟಿ ಯ ಜಿಎಚ್ ತಿಪ್ಪಾರೆಡ್ಡಿ, ಜನತಾ ದಳ (ಜಾತ್ಯತೀತ)ಯ ಕೆಸಿ ವೀರೇಂದ್ರ ಅವರ ವಿರುದ್ಧ 32,985 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ತಿಪ್ಪಾರೆಡ್ಡಿ ಅವರ ವೈಯಕ್ತಿಕ ವರ್ಚಸ್ಸು ಕ್ಷೇತ್ರದಲ್ಲಿ ಪ್ರಬಲವಾಗಿದೆ. 1994ರಿಂದ ಈ ಕ್ಷೇತ್ರದಲ್ಲಿ ಐದು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ ಈ ಬಾರಿ ಮತ್ತೆ ಅವರಿಗೆ ಬಿಜೆಪಿ ಮಣೆ ಹಾಕಲಿದೆಯ ಎಂಬ ಪ್ರಶ್ನೆಯು ಇದೆ.

ಎರಡೂವರೆ ದಶಕದಿಂದ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿರುವ ತಿಪ್ಪಾರೆಡ್ಡಿ 1994 ರಿಂದ ಐದು ಬಾರಿ ಗೆಲುವು ಸಾಧಿಸಿರುವ ಇವರು ಮತ್ತೆ ಸ್ಪರ್ಧೆಗೆ ಇಳಿಯುವ ಅವಕಾಶವನ್ನು ಬಿಜೆಪಿ ನೀಡುವುದೇ ಎಂಬ ಅನುಮಾನವೊಂದು ಕ್ಷೇತ್ರದಲ್ಲಿ ಹರಿದಾಡುತ್ತಿದೆ. ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಪುತ್ರ ಜಿ.ಎಸ್.ಅನಿತ್ ಕೂಡ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.
ಮೊದಲಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವುದು ತಿಪ್ಪಾರೆಡ್ಡಿಯಾಗಿರುವ ಕಾರಣ. ಅವರ ಎದುರು ಪ್ರಬಲ ಅಭ್ಯರ್ಥಿಯನ್ನು ಹಾಕಲು ಕಾಂಗ್ರೆಸ್ ಯೋಜಿಸುತ್ತಿದೆ. ಆದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ದಂಡೆ ಇದೆ. ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್, ಮಾಜಿ ಶಾಸಕರಾದ ಎಸ್.ಕೆ. ಬಸವರಾಜನ್, ಎ.ವಿ. ಉಮಾಪತಿ ಸೇರಿ 12 ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
2008ರಲ್ಲಿ ಜೆಡಿಎಸ್ ಚಿತ್ರದುರ್ಗದಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿ ಜೆಡಿಎಸ್‌ನಿಂದ ಕಾಂತರಾಜು ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಇ. ಜಗದೀಶ್ , ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಅಭ್ಯರ್ಥಿಗಳು ಕಣದಲ್ಲಿರಲಿದ್ದಾರೆ.
*ಮತದಾರರು*
2011 ರ ಜನಗಣತಿಯ ಪ್ರಕಾರ ಕ್ಷೇತ್ರದಲ್ಲಿ ಸಾಮಾನ್ಯ ಮತದಾರರು, ಅನಿವಾಸಿ ಭಾರತೀಯರು ಮತ್ತು ಸೇವಾನಿರತ ಮತದಾರರು ಸೇರಿ ಒಟ್ಟು 2,46,346 ಮತದಾರರಿದ್ದಾರೆ. ಸಾಮಾನ್ಯ ಮತದಾರರಲ್ಲಿ 1,23,060 ಪುರುಷರು, 1,23,210 ಮಹಿಳೆಯರು ಮತ್ತು 40 ಲೈಂಗಿಕ ಅಲ್ವಸಂಖ್ಯಾತ ಮತದಾರರು ಇದ್ದಾರೆ. ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ 100.09 ಮತ್ತು ಅಂದಾಜು ಸಾಕ್ಷರತೆಯ ಪ್ರಮಾಣ 81% ಇದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications