• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರಿನಲ್ಲಿ ಲಾರಿ ಡಿಕ್ಕಿ; ಕುರಿಗಾಹಿ, 25 ಕುರಿಗಳು ಸಾವು

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮೇ 08: ಲಾರಿ ಡಿಕ್ಕಿ ಹೊಡೆದು ಓರ್ವ ಕುರಿಗಾಹಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಕುರಿಗಳು ಸತ್ತಿರುವ ಘಟನೆ ಹಿರಿಯೂರು ತಾಲ್ಲೂಕಿನ ಹುಳಿಯಾರು ರಸ್ತೆಯ ಪಿಲಾಜನಹಳ್ಳಿ ಗೇಟ್ ಬಳಿ ಬೆಳಗಿನ ಜಾವ ನಡೆದಿದೆ.

ಕುರಿಗಾಹಿ ರಾಜು (23) ಅಪಘಾತದಲ್ಲಿ ಮೃತಪಟ್ಟ ಯುವಕ. ಲಾರಿ ಹರಿದ ಪರಿಣಾಮ ಕುರಿಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹುಳಿಯಾರಿನಿಂದ ಹಿರಿಯೂರು ತಾಲ್ಲೂಕಿನ ಕೂನಿಕೆರೆಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಕುರಿಗಳು ಚಳ್ಳಕೆರೆ ತಾಲೂಕಿನ ಪರುಶುರಾಂಪುರ ಗ್ರಾಮದ ತಿಮ್ಮಣ್ಣ ಎನ್ನುವ ವ್ಯಕ್ತಿಗೆ ಸೇರಿದ್ದವು ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
One person and 25 sheeps died in lorry accident near hiriyur
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X