• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗದಲ್ಲಿ ಮತ್ತೆ 10 ಜನರಿಗೆ ಕೊರೊನಾ ವೈರಸ್ ಸೋಂಕು ದೃಢ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಜುಲೈ 14: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ಮತ್ತೆ 10 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 130 ಕ್ಕೆ ಏರಿಕೆಯಾದಂತಾಗಿದೆ.

   ಪೋಷಕರು ಇಂತ ಸಮಯದಲ್ಲಿ ಮಕ್ಕಳ ಕಡೆ ಗಮನ ಹರಿಸಬೇಕು | oneindia Kannada

   ಇವತ್ತಿನ ವರದಿಯಲ್ಲಿ ಚಿತ್ರದುರ್ಗದ 52 ವರ್ಷದ ಪುರು, 40 ವರ್ಷದ ಪುರುಷ, ಚಿತ್ರದುರ್ಗ ತಾಲ್ಲೂಕಿನ 25 ವರ್ಷದ ಪುರುಷ, 36 ವರ್ಷದ ಪುರುಷ, ಹಿರಿಯೂರಿನ 25 ವರ್ಷದ ಮಹಿಳೆ, 34 ವರ್ಷದ ಮಹಿಳೆ, ಹಿರಿಯೂರು ತಾಲ್ಲೂಕಿನ 21 ವರ್ಷದ ಪುರುಷ, ಹೊಸದುರ್ಗದ 50 ವರ್ಷದ ಪುರುಷ, ಹೊಸದುರ್ಗ ತಾಲ್ಲೂಕಿನ 29 ವರ್ಷದ ಪುರುಷ ಹಾಗೂ ಮೊಳಕಾಲ್ಮೂರಿನ 28 ವರ್ಷದ ಪುರಷ ಸೇರಿದಂತೆ ಒಟ್ಟು 10 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

   ಚಿತ್ರದುರ್ಗದಲ್ಲಿ ಕೊರೊನಾಗೆ ಎರಡನೇ ಸಾವು; ಜಿಲ್ಲಾಡಳಿತದ ವಿರುದ್ಧ ತಿರುಗಿಬಿದ್ದ ಜನ

   ಇಂದಿನ ವರದಿಯಲ್ಲಿ ಒಟ್ಟು 95 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 10 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯ ಒಟ್ಟು 130 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೆ 83 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 45 ಸಕ್ರಿಯ ಪ್ರಕರಣಗಳು ಇವೆ.

   ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸೋಂಕಿತರ ಸಂಖ್ಯೆ ಮುಂದುವರಿದಿದ್ದು, ಕೋವಿಡ್ -19 ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಪ್ರತಿದಿನ ಮಧ್ಯಾಹ್ನ 2 ರಿಂದ ಬೆಳಿಗ್ಗೆ 5 ವರೆಗೆ ಲಾಕ್ ಡೌನ್ ಮಾಡಲು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ನವರ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಟಾಸ್ಕ್ ಫೋರ್ಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

   ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಶ್ರೀರಾಮುಲು ಸವಾಲು

   ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ, ಅನಾವಶ್ಯಕವಾಗಿ ಯಾರೂ ಮನೆಯಿಂದ ಹೊರ ಬರದಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

   ಮಹಾಮಾರಿ ಕೊರೊನಾಗೆ ಎರಡನೇ ಬಲಿಯಾಗಿದ್ದು, ಆತನ ಅಂತ್ಯಕ್ರಿಯೆಗೆ ಸ್ಥಳೀಯ ಜನರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತಪಟ್ಟ ಕೊರೊನಾ ಸೋಂಕಿತ 68 ವರ್ಷದ ವೃದ್ಧ ಸಾವನ್ನಪ್ಪಿದ್ದು, ಈತನ ಅಂತ್ಯಸಂಸ್ಕಾರಕ್ಕೆ ಚಿತ್ರದುರ್ಗ ನಗರದ ಜಟ್ ಪಟ್ ನಗರದ ನಿವಾಸಿಗಳ ವಿರೋಧ ವ್ಯಕ್ತಪಡಿಸಿದ್ದಾರೆ.

   English summary
   In Chitradurga district, again 10 people have been confirmed to be infected with coronavirus, which has increased to 130 in the district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X