• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಟೆನಾಡು ಚಿತ್ರದುರ್ಗದಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮೇ 22: ಗ್ರೀನ್ ಝೋನ್ ಪಟ್ಟಿಯಲ್ಲಿದ್ದ ಚಿತ್ರದುರ್ಗದಲ್ಲಿ ಇಂದು ಮತ್ತೊಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಸೋಂಕಿತರಲ್ಲಿ ಒಬ್ಬರು ಮಾತ್ರ ಗುಣಮುಖರಾಗಿದ್ದಾರೆ.

ಉತ್ತರ ಪ್ರದೇಶ ಮೂಲದ‌ 25 ವರ್ಷದ ವ್ಯಕ್ತಿಯಲ್ಲಿ ಇಂದು ಸೋಂಕು ದೃಢಪಟ್ಟಿದೆ. ಈ ಯುವಕ ಲಾಕ್ ಡೌನ್ ಸಮಯದಲ್ಲಿ ಚಳ್ಳಕೆರೆ ಪಟ್ಟಣದಲ್ಲಿ ಲಾಕ್ ಆಗಿದ್ದು, ಈತನಿಗೂ ಸೋಂಕು ತಗುಲಿದೆ. ತಮಿಳುನಾಡಿನಿಂದ ಉತ್ತರಪ್ರದೇಶಕ್ಕೆ ತೆರಳುವ ವೇಳೆ ಈತ ಚಳ್ಳಕೆರೆಯಲ್ಲಿ ಸಿಲುಕಿದ್ದ. ನಂತರ ಚಳ್ಳಕೆರೆ ಪಟ್ಟಣದ ಹಾಸ್ಟಲ್ ನಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.

 ಚಿತ್ರದುರ್ಗ, ಶಿವಮೊಗ್ಗ, ಉತ್ತರ ಕನ್ನಡ ಕೊರೊನಾ ಅಪ್ ಡೇಟ್ ಚಿತ್ರದುರ್ಗ, ಶಿವಮೊಗ್ಗ, ಉತ್ತರ ಕನ್ನಡ ಕೊರೊನಾ ಅಪ್ ಡೇಟ್

ಈತನ ಸಂಪರ್ಕದಲ್ಲಿದ್ದ ಉತ್ತರಪ್ರದೇಶ ಮೂಲದ 25 ಜನರ ಮೇಲೆ ನಿಗಾ ಇಡಲಾಗಿದೆ. ಸೋಂಕಿತ ಯುವಕನನ್ನು ಚಿತ್ರದುರ್ಗದ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

English summary
11 coronavirus cases reported till today In Chitradurga, uttara pradesh based person reported coronavirus positive today in challakere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X