Breaking: ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ್ದ 13 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ, ಜು.23: ವಿದ್ಯಾರ್ಥಿನಿಯಲಯದಲ್ಲಿ ರಾತ್ರಿ ಊಟ ಸೇವಿಸಿದ್ದ 13 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ನಿನ್ನೆ ರಾತ್ರಿ ಒಟ್ಟು 53 ವಿದ್ಯಾರ್ಥಿಗಳು ಊಟ ಸೇವಿಸಿದ್ದರು. ಅವರಲ್ಲಿ 13 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಸದ್ಯ 11 ವಿದ್ಯಾರ್ಥಿಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಳಲ್ಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇತ್ತೀಚೆಗೆ 21 ರಂದು ಭರಮಸಾಗರ ಹೋಬಳಿಯ ಇಸಾಮುದ್ರ ಗೊಲ್ಲರಹಟ್ಟಿ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿತ್ತು. ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ನಿಲಯ ಹಾಗೂ ಶಾಲೆಯಲ್ಲಿ ಊಟ ಸೇವಿಸಿ ಅಸ್ವಸ್ಥಗೊಳ್ಳುವ ಪ್ರಕರಣ ಆಗಾಗ ನಡೆಯುತ್ತಲೇ ಇರುತಿರುವುದಕ್ಕೆ ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications