ಚಿತ್ರದುರ್ಗದಲ್ಲಿ 17 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ

ಚಿತ್ರದುರ್ಗ, ನವೆಂಬರ್ 20: ಎಂಟು ತಿಂಗಳ ನಂತರ ನವೆಂಬರ್ 17ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಎಲ್ಲಾ ಕಾಲೇಜುಗಳು ತೆರೆದಿವೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿನ ಒಟ್ಟು 17 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಇನ್ನಿತರ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ.

ಮೊದಲ ನಾಲ್ಕು ದಿನಗಳಲ್ಲಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 1,647 ಜನರ ಆರ್​​​ಟಿಪಿಸಿಆರ್ ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಇದರಲ್ಲಿ 17 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಆರ್ ಟಿಪಿಸಿಆರ್ ಟೆಸ್ಟ್ ವರದಿ ಇದ್ದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಲಾಗುವುದು ಎಂಬ ಕಾರಣಕ್ಕೆ ಎಲ್ಲ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 17 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

ಆದರೆ ಈ ವಿದ್ಯಾರ್ಥಿಗಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲೆಯಲ್ಲಿರುವ ಕೋವಿಡ್ ಸೆಂಟರ್ ಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Chitradurga: 17 College Students Tested Coronavirus Positive

ಚಿತ್ರದುರ್ಗದಲ್ಲಿ ನ.19ರ ವರದಿಯಂತೆ ಈವರೆಗೂ ಒಟ್ಟು 13229 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. 12896 ಮಂದಿ ಗುಣಮುಖರಾಗಿದ್ದು, 270 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 63 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+