ಚಿತ್ರದುರ್ಗ: ಆಟೋಗೆ ಲಾರಿ ಡಿಕ್ಕಿ, ಇಬ್ಬರ ಸಾವು, 11 ಜನರಿಗೆ ಗಾಯ
ಮೊಳಕಾಲ್ಮೂರು, ಫೆಬ್ರವರಿ. 22 : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಅಶೋಕ ಸಿದ್ದಾಪುರ ಗ್ರಾಮದ ಬಳಿ ಬುಧವಾರ ಸಂಭವಿಸಿದ ಲಾರಿ ಹಾಗೂ ಆಟೋ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು 11 ಜನರು ಗಾಯಗೊಂಡಿದ್ದಾರೆ.
ಆಟೋದಲ್ಲಿದ್ದ ಗಂಗಮ್ಮ (34) ಮತ್ತು ಚಿರಂಜೀವಿ (28) ಮೃತ ದುರ್ದೈವಿಗಳು. ಆಟೋದಲ್ಲಿ ಒಟ್ಟು 13 ಜನರು ಪ್ರಯಾಣಿಸುತ್ತಿದ್ದು, ಉಳಿದ 11 ಜನರನ್ನು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಟೋ ರಾಂಪುರದಿಂದ ಮೊಳಕಾಲ್ಮೂರಿಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ರಾಂಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications