ಚಿತ್ರದುರ್ಗದಲ್ಲಿ 10 ಸಾವಿರ ಗಡಿ ಸಮೀಪ ಕೊರೊನಾ ಸೋಂಕಿತರು

ಚಿತ್ರದುರ್ಗ, ಅಕ್ಟೋಬರ್ 12: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 207 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 239 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 923 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಇದುವರೆಗೆ 45 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 8,416 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,351 ಸಕ್ರಿಯ ಪ್ರಕರಣಗಳು ಇವೆ.

207 New Coronavirus Cases Reported In Chitradurga On Monday

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 78,732 ಜನರ ಮಾದರಿ ಸಂಗ್ರಹಿಸಲಾಗಿದ್ದು, 68,333 ಜನರ ವರದಿ ನೆಗೆಟಿವ್ ಬಂದಿದೆ.

ಉಳಿದ 54 ಜನರ ವರದಿ ಬರುವುದು ಬಾಕಿ ಇದೆ. 486 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+