ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೆ 24 ಜನರಿಗೆ ಕೋವಿಡ್ ಸೋಂಕು ದೃಢ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 17: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಮತ್ತೆ 24 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 178 ಕ್ಕೆ ಏರಿಕೆಯಾದಂತಾಗಿದೆ.

Recommended Video

ಕೊರೊನ ವಿರುದ್ಧದ ಯುದ್ಧದಲ್ಲಿ ಗೆದ್ದ Sharath Bacche Gowda | Oneindia Kannada

ಒಟ್ಟು 359 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 24 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ ಮೂವರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 103 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 69 ಸಕ್ರಿಯ ಪ್ರಕರಣಗಳು ಬಾಕಿ ಇವೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮೂರನೇ ಬಲಿಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮೂರನೇ ಬಲಿ

69 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 21, ಭರಮಸಾಗರ-03, ಹಿರಿಯೂರು ತಾಲ್ಲೂಕು ಧರ್ಮಪುರ-08, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 03, ಹೊಸದುರ್ಗ ತಾಲ್ಲೂಕು ಬೆಲಗೂರು- 05, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 04, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 07 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

24 New Coronavirus Infection Cases Reported In Chitradurga

ಸದ್ಯ ಜಿಲ್ಲೆಯಲ್ಲಿ ಒಟ್ಟು 42 ಕಂಟೈನ್ಮೆಂಟ್ ವಲಯಗಳಿವೆ. ಕೊರೊನಾ ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2102 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್ಐ, ಯುಆರ್ಐನ ಒಟ್ಟು 3252 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ 583 ಜನ ಹೋಂ ಕ್ವಾರಂಟೈನ್ ನಲ್ಲಿ ಹಾಗೂ ಇಬ್ಬರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದಾರೆ.

English summary
Friday's report on the Covid-19 virus in Chitradurga district has confirmed that 24 people have been infected with coronavirus, which has increased to 178 in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X