ಚಿತ್ರದುರ್ಗದಲ್ಲಿ ಇಂದು 263 ಜನರಿಗೆ ಕೋವಿಡ್ ಸೋಂಕು ಪತ್ತೆ

ಚಿತ್ರದುರ್ಗ, ಅಕ್ಟೋಬರ್ 13: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 263 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,122ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 440 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 1805 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಇದುವರೆಗೆ 45 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 8,856 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,174 ಸಕ್ರಿಯ ಪ್ರಕರಣಗಳು ಇವೆ.

263 New Coronavirus Cases Reported In Chitradurga On Tuesday

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 80,537 ಜನರ ಮಾದರಿ ಸಂಗ್ರಹಿಸಲಾಗಿದ್ದು, 69,718 ಜನರ ವರದಿ ನೆಗೆಟಿವ್ ಬಂದಿದೆ.

ಉಳಿದ 210 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+