ಚಿತ್ರದುರ್ಗದಲ್ಲಿ 353 ಜನರಿಗೆ ಕೋವಿಡ್ ಸೋಂಕು ದೃಢ: ಸೋಂಕಿತರ ಸಂಖ್ಯೆ 6,423ಕ್ಕೆ ಏರಿಕೆ

ಚಿತ್ರದುರ್ಗ, ಸೆಪ್ಟೆಂಬರ್ 21: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 353 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,423ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 180, ಚಳ್ಳಕೆರೆ 69, ಹಿರಿಯೂರು 04, ಹೊಸದುರ್ಗ 40, ಮೊಳಕಾಲ್ಮೂರು 09 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 51 ಸೇರಿದಂತೆ ಒಟ್ಟು 353 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 246 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 376 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

353 New Coronavirus Cases Reported In Chitradurga District

ಇದುವರೆಗೆ ಜಿಲ್ಲೆಯಲ್ಲಿ 35 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 5,076 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,264 ಸಕ್ರಿಯ ಪ್ರಕರಣಗಳು ಇವೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 2816 ಕಂಟೈನ್ಮೆಂಟ್ ವಲಯಗಳಿದ್ದು, ಕೊರೊನಾ ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 39,803 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

Recommended Video

      IPL2020 SRH VS RCB | Virat Kohli ಅಭಿಮಾನಿಗಳಿಗೆ ಭಾರೀ ನಿರಾಸೆ | Oneindia Kannada

      ಈವರೆಗೆ 55,520 ಜನರ ಮಾದರಿ ಸಂಗ್ರಹಿಸಲಾಗಿದ್ದು, 48,016 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 628 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+