ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 381 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ, ಅಕ್ಟೋಬರ್ 9: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 381 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,673ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 203 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು 1389 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು, ಇದುವರೆಗೆ 39 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

381 News Coronavirus Cases Reported In Chitradurga On Friday

ಸೋಂಕಿತರ ಪೈಕಿ ಈಗಾಗಲೆ 8,207 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಸದ್ಯ 959 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 75,394 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 74,561 ಜನರ ಮಾದರಿ ಸಂಗ್ರಹಿಸಲಾಗಿದ್ದು, 65,350 ಜನರ ವರದಿ ನೆಗೆಟಿವ್ ಬಂದಿದೆ.

ಉಳಿದ 61 ಜನರ ವರದಿ ಬರುವುದು ಬಾಕಿ ಇದೆ. 477 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+