ಚಿತ್ರದುರ್ಗದಲ್ಲಿ ಇಂದು 392 ಜನರಿಗೆ ಕೋವಿಡ್ ಸೋಂಕು ದೃಢ
ಚಿತ್ರದುರ್ಗ, ಅಕ್ಟೋಬರ್ 11: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 382 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9652 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 957 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 1543 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.
ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು 4 ಜನರು ಮೃತಪಟ್ಟಿದ್ದು, ಇದುವರೆಗೆ 45 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8177 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಸದ್ಯ 1383 ಸಕ್ರಿಯ ಪ್ರಕರಣಗಳು ಇವೆ.

ಕೊರೊನಾ ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 74,010 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 77,809 ಜನರ ಮಾದರಿ ಸಂಗ್ರಹಿಸಲಾಗಿದ್ದು, 67,550 ಜನರ ವರದಿ ನೆಗೆಟಿವ್ ಬಂದಿದೆ.
ಉಳಿದ 121 ಜನರ ವರದಿ ಬರುವುದು ಬಾಕಿ ಇದ್ದು, 486 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.












Click it and Unblock the Notifications