ಚಿತ್ರದುರ್ಗ: ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ 4,973 ಜೋಡಿಗಳು
ಚಿತ್ರದುರ್ಗ, ಆಗಸ್ಟ್ 10: ನಾನಾ ಕಾರಣದಿಂದ ಮನಸ್ತಾಪಗೊಂಡು ಪರಸ್ಪರ ವಿಚ್ಛೇದನ ಬಯಸಿದ್ದ ಸುಮಾರು 4,973 ಜೋಡಿಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ತಮ್ಮ ನಡುವಿನ ಮನಸ್ತಾಪ ಮರೆತು ಮತ್ತೆ ಒಂದಾಗಿದ್ದಾರೆ. ಜುಲೈ 13ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,973 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ತಿಳಿಸಿದ್ದಾರೆ.
ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 1,16,278 ವ್ಯಾಜ್ಯ ಪೂರ್ವ ಪ್ರಕರಣಗಳ ಜೊತೆಗೆ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ. ಈ ಮೂಲಕ ಕೌಟುಂಬಿಕ ವಿಘಟನೆ ತಪ್ಪಿ, ಮಕ್ಕಳಿಗೆ ತಂದೆ ತಾಯಿ ಪ್ರೀತಿ ದೊರೆಯುವಂತಾಗಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ ಅಭಿಪ್ರಾಯಪಟ್ಟರು.

ಸರ್ವೋಚ್ಛ ನ್ಯಾಯಾಲಯದ 3 ಪ್ರಕರಣ ಇತ್ಯರ್ಥ
ಸರ್ವೋಚ್ಚ ನ್ಯಾಯಾಲಯ ಸ್ಥಾಪನೆಯಾದ 75 ವರ್ಷಗಳ ಅಂಗವಾಗಿ ಜುಲೈ 29 ರಿಂದ ಆಗಸ್ಟ್ 3 ವರೆಗೆ ವಿಶೇಷ ಲೋಕದಲತ್ ಆಯೋಜಿಸಲಾಗಿತ್ತು. ಇದರಲ್ಲಿ ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಕೈಗೆತ್ತಿಕೊಳ್ಳಲಾಗಿತ್ತು. ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ 22 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಗುರುತಿಸಲಾಗಿತ್ತು. ಇದರಲ್ಲಿ 3 ಪ್ರಕರಣಗಳು ಇತ್ಯರ್ಥಗೊಂಡು ಸುಖಾಂತ್ಯ ಕಂಡಿವೆ. ಇದೊಂದು ದಾಖಲೆಯ ಮೈಲುಗಲ್ಲಾಗಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ ತಿಳಿಸಿದರು.
ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್
ಮುಂಬರುವ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ.

ಇದರರೊಂದಿಗೆ ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್ ಕಾಂಪೌಡಬಲ್ ಹಾಗೂ ಗಂಭೀರ ತರದ ಅಪರಾಧಿಕ ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು. ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್‌ನಲ್ಲಿ ಭಾಗವಹಿಸಬಹುದು.
ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಪ್ರಶ್ನೆ ಮತ್ತು ಮಾಹಿತಿಗಾಗಿ ಬೇಕಾದಲ್ಲಿ ಇ-ಮೇಲ್ [email protected] ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊಬೈಲ್ ಸಂಖ್ಯೆ 9141193935 ಹಾಗೂ ದೂರವಾಣಿ ಸಂಖ್ಯೆ 08194- 222322ಕ್ಕೆ ಸಹ ಸಂಪರ್ಕಿಸಬಹುದು ಎಂದು ನ್ಯಾಯಾಧೀಶ ರೋಣ ವಾಸುದೇವ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ವಿಜಯ್ ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications