ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ದರ್ಮರಣ

Posted By:
Subscribe to Oneindia Kannada

ಚಿತ್ರದುರ್ಗ, ಆಗಸ್ಟ್ 17 : ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಹರ್ತಿಕೋಟೆ ಬಳಿ ಇಂದು ನಸುಕಿನಲ್ಲಿ ನಡೆದಿದೆ.

ಹಿರಿಯೂರು ಪಟ್ಟಣದ ಸಮೀಪವಿರುವ ನಂಜಯ್ಯನ ಕೊಟ್ಟಿಗೆ ನಿವಾಸಿಗಳಾದ ಮನೋಹರ್, ಶರಣ್, ಮುತ್ತು ಹಾಗು ಮದಕರಿಪುರ ಗ್ರಾಮದ ನಿವಾಸಿ ಚಿದಾನಂದ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರ ಹೆಸರು ತಿಳಿದುಬಂದಿಲ್ಲ.

4 killed 2 injured in auto and lorry collision at Chitradurga district

ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಬರುತ್ತಿದ್ದ ಆಟೋಗೆ.ಚಳ್ಳಕೆರೆ ಕಡೆಯಿಂದ ಹಿರಿಯೂರಿನ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಘಟನಾ ಸ್ಥಳಕ್ಕೆ ಐಮಂಗಲ ಪೊಲೀಸರು ಆಗಮಿಸಿ ಪರಿಶಿಲೀಸಿದರು. ಈ ಬಗ್ಗೆ ಐಮಂಗಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Four killed two injured in auto and lorry collision at Harthikote village, Chitradurga district, Hiriyur taluk on August 17th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ